ಒಲಿಂಪಿಕ್ಸ್ ಕುಸ್ತಿ: ರವಿಕುಮಾರ್ ದಹಿಯಾ ಫೈನಲ್‌ಗೆ ಪ್ರವೇಶ

ಟೋಕಿಯೊ: ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ರವಿಕುಮಾರ್ ಒಲಿಂಪಿಕ್ಸ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಇಂದು ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು ಕಂಚು ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಭಾರತದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸುವ ಮೂಲಕ ಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಆದರೆ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. […]

ಉಡುಪಿ: ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿ; ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ; ಡಿಸಿ ಜಿ. ಜಗದೀಶ್ ಆದೇಶ

ಉಡುಪಿ: ಕೋವಿಡ್ ನಿಧಾನವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ. ಪಬ್‌ ಗಳಿಗೆ ಅನುಮತಿ ಇರುವುದಿಲ್ಲ. ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು […]

ಕೋಟ, ಸುನಿಲ್ ಕುಮಾರ್ ಗೆ ಮಂತ್ರಿ ಸ್ಥಾನ : ಪೆರಂಪಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪೆರಂಪಳ್ಳಿ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಪೆರಂಪಳ್ಳಿ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು ಪೆರಂಪಳ್ಳಿ ಪೇಟೆಯಲ್ಲಿ ಸಂಭ್ರಮಾಚರಣೆ ನಡೆಸಿದರು.‌‌‌ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಉಡುಪಿ: ಕೋವಿಡ್ ಸೋಂಕಿತರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್; ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸುವ ಉದ್ದೇಶದಿಂದ ಆಗಸ್ಟ್ 5ರ ಗುರುವಾರದಿಂದ, ಕೋವಿಡ್-19 ಪಾಸಿಟಿವ್ ವ್ಯಕ್ತಿಗಳನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ (Covid Care Centre )ಗೆ ಸ್ಥಳಾಂತರಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ಸಲುವಾಗಿ ಹಾಗೂ ಜನರಿಗೆ ಸೋಂಕು ತಗಲದಂತೆ ಮಾಡಲು ಕ್ವಾರಂಟೈನ್ ಅಗತ್ಯವಾಗಿದೆ. ಕೋವಿಡ್ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ […]

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂರನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೋಟ ಶ್ರೀನಿವಾಸ ಪೂಜಾರಿ ಹಾಗೂ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿ ಕರಾವಳಿಯ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನಮಂತ್ರಿ ನರೇಂದ್ರ  ಮೋದಿ, ಗೃಹ ಸಚಿವರಾದ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಮಾಜಿ ಮುಖ್ಯಮಂತ್ರಿ […]