ಸಂಪುಟ ರಚನೆ: ಘಟಾನುಘಟಿ ನಾಯಕರಿಗೆ ಕೊಕ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಘಟಾನುಘಟಿಗಳನ್ನು ಕೈಬಿಡಲಾಗಿದೆ. ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್, ಎಸ್. ಸುರೇಶ್ ಕುಮಾರ್, ವಲಸಿಗಾರದ ಶ್ರೀಮಂತ್ ಪಾಟೀಲ್, ಆರ್. ಶಂಕರ್ ಅವರಿಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅರವಿಂದ ಬೆಲ್ಲದ, ಬಸವನಗೌಡ ಪಾಟೀಲ ಯತ್ನಾಳ್, ರೇಣುಕಾಚಾರ್ಯ, ರಾಜೂ ಗೌಡ ಅವರ ಹೆಸರೂ ಸಚಿವರಾಗುವವರ ಪಟ್ಟಿಯಲ್ಲಿ ಇಲ್ಲ.
ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಒಲಿದ ಸಚಿವ ಸ್ಥಾನ

ಉಡುಪಿ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೆ ಸಚಿವ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಹಿನ್ನೆಲೆಯಲ್ಲಿ ಮತ್ತೆ ಸಚಿವ ಸ್ಥಾನ ಒಲಿದಿದೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ: ಕರೆ ಹೋಗಿರುವ ಶಾಸಕರ ಪಟ್ಟಿ ಇಲ್ಲಿದೆ

ಬೆಂಗಳೂರು: ನೂತನ ಸಚಿವರ ಪಟ್ಟಿ ಬೆಳಿಗ್ಗೆ 11ರಿಂದ 11.30ರ ಮಧ್ಯೆ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರ ಬೆಳಿಗ್ಗೆ ದೆಹಲಿಯಿಂದ ಮರಳಿದ ಬೊಮ್ಮಾಯಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ರಾಜಭವನನದ ಗಾಜಿನ ಮನೆಯಲ್ಲಿ ಮಧ್ಯಾಹ್ನ 2.15ಕ್ಕೆ ಪ್ರಮಾಣ ವಚನ ನಡೆಯಲಿದೆ ಎಂದೂ ಅವರು ಹೇಳಿದರು. ಎರಡು ವಿಷಯ ಬಾಕಿ ಇದೆ: ಸಂಪುಟಕ್ಕೆ ಯಾರನ್ನೆಲ್ಲ ಸೇರಿಸಬೇಕೆಂಬ ಬಗ್ಗೆ ವರಿಷ್ಠರು ಎರಡು ದಿನ ಚರ್ಚೆ ಮಾಡಿದ್ದಾರೆ. ಎರಡು ವಿಷಯಗಳ […]
ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಒಲಿದ ಸಚಿವ ಸ್ಥಾನ

ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕಡೆಗೂ ಸಚಿವನಾಗುವ ಭಾಗ್ಯ ಕೂಡಿ ಬಂದಿದ್ದು, ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ನೇಮಕಗೊಂಡಿದ್ದಾರೆ. ಕರಾವಳಿ ಭಾಗದ ಪ್ರಭಾವಿ ಮುಖಂಡನಾಗಿರುವ ಸುನಿಲ್ ಕುಮಾರ್, ಈ ಹಿಂದೆಯೇ ಸಚಿವರಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಚಿವ ಸ್ಥಾನ ಸಿಕ್ಕಿರಲಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದೂವರೆ ವರ್ಷ ಬಾಕಿ ಇರುವುದರಿಂದ ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಅಸ್ತು ಎಂದಿದೆ ಎನ್ನಲಾಗಿದೆ. ಆರ್ ಎಸ್ಎಸ್ […]