ಉಡುಪಿ ಜಿಲ್ಲೆಗೆ ಸಚಿವ ಸ್ಥಾನ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ

ಉಡುಪಿ: ಕರ್ನಾಟಕ ರಾಜ್ಯ ಬಿಜೆಪಿ ಸರಕಾರದ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಗುರುವಾರ ಸಂಭ್ರಮಾಚರಣೆ ನಡೆಯಿತು. ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಪಕ್ಷದ ಹಿರಿಯರು, ಕಾರ್ಯಕರ್ತರು, ಮುಖಂಡರು ಸೇರಿ ಸಂಭ್ರಮಾಚರಣೆ ನಡೆಸಿದರು. ಬಳಿಕ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]

ಕೃಷಿ ಯಂತ್ರೋಪಕರಣ ಮಾರಾಟ ಮಾಡುವ ಡೀಲರ್ ಗಳು ಗರಿಷ್ಟ ಮಾರಾಟ ದರ ಪ್ರದರ್ಶಿಸುವುದು ಕಡ್ಡಾಯ: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ: ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ರೈತರು ಖರೀದಿಸುವ ಕೃಷಿ ಯಂತ್ರೋಪಕರಣ ಮಾರಾಟ ಮಾಡುವ ಡೀಲರ್‍ಗಳು ಕಡ್ಡಾಯವಾಗಿ ಗರಿಷ್ಟ ಮಾರಾಟ ದರ(ಎಂಆರ್ ಪಿ) ವನ್ನು ಪ್ರದರ್ಶಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿ ಯಂತ್ರೋಪಕರಣ ಉತ್ಪಾದನಾ ಕಂಪನಿಗಳು, ಮಾರಾಟ ಮಾಡುವ ಡೀಲರ್‍ಗಳು ಹಾಗೂ ಆಯಾ ರಾಜ್ಯ ಸರ್ಕಾರಗಳ ಕೃಷಿ ಇಲಾಖೆಗಳ ಅಧಿಕೃತ ವೆಬ್ ಸೈಟ್‍ಗಳಲ್ಲೂ […]

ಮಂಗಳೂರು ವಿವಿಯ ಬಾಕಿ ಪರೀಕ್ಷೆಗಳನ್ನು ಮುಂದುವರಿಸಿ: ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು. ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ […]

ಉಡುಪಿ: ಇಂದು ಜಿಲ್ಲಾ ಬಿಜೆಪಿ ವತಿಯಿಂದ ನೂತನ ಸಚಿವರಿಗೆ ಅಭಿನಂದನೆ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಅವರ ಅಭಿನಂದನಾ ಸಮಾರಂಭವು‌ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಮಾರಂಭದ ಅಧ್ಯಕ್ಷತೆಯಲ್ಲಿ ಆಗಸ್ಟ್ 6ರ ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ. ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ […]

ಒಲಿಂಪಿಕ್ಸ್ ಕುಸ್ತಿ: ಫೈನಲ್ ನಲ್ಲಿ ಸೋತು ಬೆಳ್ಳಿ ಗೆದ್ದ ರವಿಕುಮಾರ್ ದಹಿಯಾ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ. ಇಂದು ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು.