ಮಲ್ಪೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳ ನಾಯಕತ್ವ ತರಬೇತಿ ಕಾರ್ಯಾಗಾರ

ಮಲ್ಪೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಲ್ಪೆ ವಲಯದ 14 ಒಕ್ಕೂಟಗಳ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಕಾರ್ಯಾಗಾರವನ್ನು ತೆಂಕನಿಡಿಯೂರು ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಮಾತನಾಡಿದ ಮಲ್ಪೆ ಪೋಲೀಸ್ ಠಾಣೆಯ ಸಬ್ ಇನ್ಸ್ ಸ್ಪೆಕ್ಟರ್ ಸಕ್ತಿವೇಲು ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಲ್ಲಿ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿದೆ. ಸಮಾಜದ ಎಲ್ಲ ವರ್ಗದ ಮಹಿಳೆಯರಿಗೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವುದರ ಮೂಲಕ ಅವರ ಸರ್ವಾಂಗೀಣ ಅಭಿವೃದ್ಧಿಗೂ ಪೂರಕವಾಗಿದೆ. ಅದೇ ರೀತಿ […]

ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದುಬಿದ್ದು ಯುವಕ ಮೃತ್ಯು

ಕಾರ್ಕಳ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದ ಮೈದಾನದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದನು ಎನ್ನಲಾಗಿದೆ. ನಿನ್ನೆ ಸಂಜೆ ಸ್ನೇಹಿತರೊಂದಿಗೆ ಸೇರಿ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಬೌಲಿಂಗ್ ಮಾಡುವ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

41 ವರ್ಷದ ಬಳಿಕ ಒಲಿಂಪಿಕ್ಸ್ ಹಾಕಿಯಲ್ಲಿ ಪದಕ ಗೆದ್ದ ಭಾರತ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ಹಾಕಿ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿತು. ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದೆ. ಇದು ರಾಷ್ಟ್ರೀಯ ಕ್ರೀಡೆ ಹಾಕಿ ಪಾಲಿಗೆ ಐತಿಹಾಸಿಕ ಕ್ಷಣವಾಗಿದೆ. 1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ […]

ಕರ್ನಾಟಕದ ನೂತನ ಸಚಿವರಿಗೆ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆಗಳು

ಉಡುಪಿ: ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಭಿನಂದನೆಗಳು. ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವೃದ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಬಿಜೆಪಿ […]