ಉಡುಪಿ: ಜಿಲ್ಲಾ ನ್ಯಾಯಾಧೀಶೆಯಾಗಿ ಮಮ್ತಾಝ್ ನೇಮಕ

ಉಡುಪಿ: ಉಡುಪಿ ಕಾನೂನು ಅಧಿಕಾರಿ ಕಿರಿಯ/ಎಡಿಪಿ (Assistant Director of Prosecution )ಆಗಿರುವ ಮಮ್ತಾಝ್ ಅವರು ಜಿಲ್ಲಾ ನ್ಯಾಯಾಧೀಶೆಯಾಗಿ ನೇಮಕಗೊಂಡಿದ್ದಾರೆ. ಇವರು ಫ್ರೆಬವರಿ- ಮಾರ್ಚ್‌ನಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆ ಬರೆದಿದ್ದು, ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ 12 ಮಂದಿಯಲ್ಲಿ ಇವರು ರಾಜ್ಯದಲ್ಲಿ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಈ ಮೂಲಕ ಅವರು ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ ಕರ್ನಾಟಕ ರಾಜ್ಯದ ಮೊದಲ ಮುಸ್ಲಿಮ್ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಲ್ಕಿ ಮೂಲದ ಅತಿಜಮ್ಮ ಹಾಗೂ ಅಬ್ದುಲ್ ರಹಿಮಾನ್ ದಂಪತಿಯ ಪುತ್ರಿಯಾಗಿರುವ […]

ಆ.23ರಿಂದ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ತರಗತಿ ಆರಂಭ: ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೂರನೇ ಅಲೆಯ ಭೀತಿಯ ನಡುವೆಯೇ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಇಂದು ನಡೆದ ತಜ್ಞರ ಜತೆಗಿನ ಸಭೆಯ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಾಲೆಗಳ ಆರಂಭದ ಕುರಿತು ತಜ್ಞರ ಜತೆ ಚರ್ಚಿಸಲಾಗಿದ್ದು, ಇದೇ 23ರಿಂದ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲಾಗುವುದು ಎಂದರು. ಎರಡು ಪ್ರತ್ಯೇಕ ವಿದ್ಯಾರ್ಥಿಗಳ ಗುಂಪು ರಚಿಸಿಕೊಂಡು ತರಗತಿ ನಡೆಸಲು ನಿರ್ಧರಿಸಲಾಗಿದೆ. ದಿನ ಬಿಟ್ಟು ದಿನ ತರಗತಿ ನಡೆಯಲಿದೆ. ಒಂದರಿಂದ […]

ಕೊರೊನಾ ಹೆಚ್ಚಳ: ಗಡಿ ಜಿಲ್ಲೆಗಳಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ; ಸಿಎಂ ಬೊಮ್ಮಾಯಿ

(ಉಡುಪಿ ಎಕ್ಸ್‌ಪ್ರೆಸ್‌ ವರದಿ) ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಇಂದು ಸಿಎಂ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಸಭೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲಾ ಗಡಿ ಜಿಲ್ಲೆಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ನಾಳೆ (ಆ.7) ವಾರಾಂತ್ಯದ ಕರ್ಪ್ಯೂ […]

ರಾಜ್ಯದಲ್ಲಿ ಸಂಜೆ 7ರಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ, ಶನಿವಾರ-ಭಾನುವಾರ ಪೂರ್ತಿ ಲಾಕ್ ಡೌನ್ ಮಾಡಿ: ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳನ್ನು ಜಾರಿ ಮಾಡುವಂತೆ ತಾಂತ್ರಿಕ ಸಲಹಾ ಸಮಿತಿ (Technical Advisory Committee) ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಮತ್ತೆ ಕಠಿಣ ಕ್ರಮ ಜಾರಿ ಮಾಡುವ ಅನಿವಾರ್ಯವಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಬಸ್​ಗಳ​ ಸಂಚಾರಕ್ಕೆ ಅವಕಾಶ ನೀಡಬೇಕು. ಸಂಜೆ 7 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಬೇಕು. ಶುಕ್ರವಾರ ಸಂಜೆ […]

ಅಭಿನಂದಿಸಲು ಹಾರ ತುರಾಯಿ ತರಬೇಡಿ, ಕನ್ನಡ ಪುಸ್ತಕ ಕೊಡಿ; ಸಚಿವ ಸುನಿಲ್ ಕುಮಾರ್ ಕರೆ

ಕಾರ್ಕಳ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ನಿಮಗೆ ಏನಾದರೂ ಕೊಡಲೇಬೇಕೆಂದಿದ್ದರೆ ಒಂದು ಕನ್ನಡ ಪುಸ್ತಕ ತನ್ನಿ. ನಾನು ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆಂದು ನೂತನ ಸಚಿವ ವಿ. ಸುನಿಲ್ ಕುಮಾರ್ ಅವರು ಅಭಿಮಾನಿಗಳು, ಹಿತೈಷಿಗಳು ಹಾಗೂ ಕಾರ್ಯಕರ್ತರಲ್ಲಿ ವಿನಂತಿಸಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಕಾರ್ಕಳದ ಬಂಡಿಮಠದಲ್ಲಿ ಸಚಿವ ಸುನಿಲ್ ಕುಮಾರ್ ಅವರಿಗೆ ಸಾರ್ವಜನಿಕ ಸನ್ಮಾನ ನಡೆಯಲಿದೆ. ಬಳಿಕ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ ಜರುಗಲಿದೆ. ಈ ಹಿನ್ನೆಲೆಯಲ್ಲಿ ಅವರು, ಇಂದು ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಸುರತ್ಕಲ್, […]