ಉಡುಪಿ: ಪ್ರಸಕ್ತ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಕಳೆದ ಮೂರು ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾ ಪೋಷಕರು  ಆಗಸ್ಟ್ 25 ರೊಳಗೆ  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2521324, 94808-86467 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ರಾಜ್ಯ  ಮಹಿಳಾ ಅಭಿವೃದ್ಧಿ ನಿಗಮದಿಂದ ,ಉಡುಪಿ ಜಿಲ್ಲೆಯಲ್ಲಿ ಕೆಳಕಂಡ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ:- 18 ರಿಂದ 55 ವರ್ಷ ವಯಸ್ಸಿನ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ 2.00 ಲಕ್ಷ ಆದಾಯ ಹಾಗೂ ಇತರೆ ವರ್ಗದ 1.50 ಲಕ್ಷ ಆದಾಯ ಹೊಂದಿರುವ ಮಹಿಳೆಯರು ಆದಾಯೋತ್ಪನ್ನಕರ ಚಟುವಟಿಕೆ ಕೈಗೊಳ್ಳಲು ರಾಷ್ಟಿಕೃತ ಬ್ಯಾಂಕಿನಿಂದ ನೀಡುವ ಗರಿಷ್ಠ 3.00 ಲಕ್ಷ ಸಾಲಕ್ಕೆ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಹಿಳೆಯರಿಗೆ ಗರಿಷ್ಠ ರೂ.150000/- ಹಾಗೂ ಇತರೆ […]

ಖಾತೆ ಹಂಚಿಕೆ ವಿಚಾರ; ಗೊಂದಲ ‌ಬಗೆಹರಿಸಲು ಪಕ್ಷದ ಆಂತರಿಕ ವ್ಯವಸ್ಥೆ ಇದೆ: ಸುನಿಲ್ ಕುಮಾರ್ 

ಉಡುಪಿ: ಬಿಜೆಪಿಯಲ್ಲಿ ಖಾತೆ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಬೇಸರಗೊಂಡ ಸಚಿವರನ್ನು ಮುಖ್ಯಮಂತ್ರಿ ಅವರು ಕರೆದು ಮಾತನಾಡುತ್ತಾರೆ. ಸಮಸ್ಯೆ ಬಗೆಹರಿಸಲು ಬಿಜೆಪಿಯಲ್ಲಿ ಆಂತರಿಕ ವ್ಯವಸ್ಥೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸೋಮವಾರ ಮಾಧ್ಯಮದ ಜತೆ ಮಾತನಾಡಿದರು. ದೇವೇಗೌಡರು ಹಾಗೂ ಸಿಎಂ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರ ಜೊತೆಗೂ ಕೂಡ ಫ್ರೆಂಡ್ಶಿಪ್ ಇರಬಹುದು, ಆದರೆ ಅದರಿಂದಾಗಿ ಬದ್ಧತೆ ಮತ್ತು ಕಾರ್ಯಶೈಲಿಯಲ್ಲಿ ವ್ಯತ್ಯಾಸಗಳು ಆಗಬಾರದು ಎಂದರು. ಇಲಾಖೆಯ ಹಿತಾಸಕ್ತಿ ಕಾಪಾಡುತ್ತೇವೆ… […]

ಪರಿಶಿಷ್ಟ ಜಾತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹5 ಲಕ್ಷ: ಸಚಿವ ಕೋಟ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ₹5 ಲಕ್ಷ ಅನುದಾನ ನೀಡಲು ಅನುಮತಿ ಕೋರಿ ಮುಖ್ಯಮಂತ್ರಿಯವರಿಗೆ ಶೀಘ್ರದಲ್ಲೇ […]

ಎಸೆಸ್ಸೆಲ್ಸಿ ಫಲಿತಾಂಶ: ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರೂ ಪಾಸ್

ಬೆಂಗಳೂರು: ಕೋವಿಡ್ ಕಾರಣದಿಂದ ಈ ಸಲ ವಿಶೇಷವಾಗಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು. ಕೋವಿಡ್ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್​ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದ ಅವರು, ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು  ಪಾಸ್​ ಮಾಡಲಾಗಿದೆ ಎಂದರು.  ಶೇ. 99.9 ಪಾಸ್ ಆಗಿದ್ದಾರೆ.  […]