ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಬಗ್ಗೆ ಮಾಹಿತಿ ನೀಡಿದರು. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಸಚಿವರು ತಿಳಿಸಿದರು. ವಿದ್ಯಾರ್ಥಿಗಳು https://sslckarnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಫಲಿತಾಂಶದಲ್ಲಿ ಎ + ಶ್ರೇಣಿಯಲ್ಲಿ 1,28,931 (ಶೇ.16.25) ವಿದ್ಯಾರ್ಥಿಗಳು, ಎ ಶ್ರೇಣಿಯಲ್ಲಿ 2,50,317(ಶೇ 32)ವಿದ್ಯಾರ್ಥಿಗಳು, ಬಿ  […]

ಶಾಲಾರಂಭ ಸ್ವಲ್ಪ ತಡವಾಗಬಹುದು, ಸುಳಿವು ನೀಡಿದ ಶಿಕ್ಷಣ ಸಚಿವ

ತುಮಕೂರು: 9,10,11,12ನೇ ಭೌತಿಕ ತರಗತಿಗಳ ಆರಂಭ ತಡವಾಗಬಹುದು ಎಂಬ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ಸುರೇಶ್ ಅವರು ನೀಡಿದ್ದಾರೆ. ಆಗಸ್ಟ್ 23 ರಿಂದ 9-12ನೇ ತರಗತಿಗಳ ಭೌತಿಕ ಆರಂಭ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇದು ತಾತ್ಕಾಲಿಕ ದಿನಾಂಕವಾಗಿದ್ದು, ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಿಖರವಾದ ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸುವುದರಲ್ಲಿ ನಾನು ಕಾರ್ಯನಿರತನಾಗಿದ್ದೆ. ಶೀಘ್ರದಲ್ಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. […]

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ದ್ವೇಷ ರಾಜಕೀಯದ ಕೈಗನ್ನಡಿ; ವೆರೋನಿಕಾ ಕರ್ನೇಲಿಯೋ

ಉಡುಪಿ: ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮುಖ್ಯಮಂತ್ರಿಗೆ ಸಲಹೆ ಮಾಡಿರುವುದು ದ್ವೇಷ ರಾಜಕೀಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್‌ ಆರಂಭಿಸಿದ್ದು, ಉತ್ತಮ ಸೇವೆ‌ ನೀಡುತ್ತಿದೆ. ಸಿದ್ದರಾಮಯ್ಯ ಅವರ ದೂರದೃಷ್ಟಿಯ ಫಲವಾಗಿ ಬಡವರು ಮತ್ತು ಮಧ್ಯಮ ವರ್ಗದವರು ಕನಿಷ್ಠ ಹಣದಲ್ಲಿ ಉತ್ತಮ ಆಹಾರ ಪಡೆಯುವ ಯೋಜನೆಗೆ ಇಂದಿರಾ ಕ್ಯಾಂಟಿನ್‌ […]

ಶ್ರೀ ಲಕ್ಷ್ಮೀವೆಂಕಟೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಜಿಲ್ಲಾಸ್ಪತ್ರೆಗೆ ಅಂಬ್ಯುಲೆನ್ಸ್ ಹಸ್ತಾಂತರ

ಉಡುಪಿ: ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸುಮಾರು16,50,000 ರೂ. ಮೊತ್ತದ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ಆ.9 ರಂದು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಯಿತು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ಹಾಗೂ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಅಂಬ್ಯುಲೆನ್ಸ್ ಹಾಸ್ತಾಂತರಿಸಲಾಯಿತು. ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನ ಅಗತ್ಯತೆ ಬಗ್ಗೆ ಶ್ರೀ ಲಕ್ಷ್ಮೀವೆಂಕಟೇಶ […]

ಇಂದು (ಆ.9) ಆರ್ಟ್ ಮತ್ತು ಆರ್ಟಿಕಲ್ಸ್ ಪುಸ್ತಕ ಬಿಡುಗಡೆ

ಉಡುಪಿ: ಸುನಾಗ್ ಆಸ್ಪತ್ರೆ ಕುಂಜಿಬೆಟ್ಟು ಇವರ ಆಶ್ರಯದಲ್ಲಿ ಸುನವ್ಯ ಸಂಹಿತಾರ ಆರ್ಟ್ ಮತ್ತು ಆರ್ಟಿಕಲ್ಸ್ ಪುಸ್ತಕ ಬಿಡುಗಡೆ ಸಮಾರಂಭ ಇಂದು (ಆ.9) ಸಂಜೆ 5 ಗಂಟೆಗೆ ಕಡಿಯಾಳಿಯ ಭರತಾಂಜಲಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮನೋವೈದ್ಯರಾದ ಡಾ.ಪಿ.ವಿ. ಭಂಡಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯ ಮೂಳೆರೋಗ ತಜ್ಞ ಡಾ.ಕಿರಣ್ ಆಚಾರ್ಯ ಪುಸ್ತಕದ ಕುರಿತು ಮಾತನಾಡಲಿದ್ದು, ಡೆಂಟಾಕೇರ್ ನಿರ್ದೇಶಕ ಡಾ.ವಿಜಯೇಂದ್ರ ವಸಂತ್ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದು […]