ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಶ್ರೀಕೃಷ್ಣಮಠಕ್ಕೆ ಭೇಟಿ
ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯತೀರ್ಥ ಶ್ರೀಪಾದರು ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು. ಅರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಸಮಿತಿಯ ಪದಾಧಿಕಾರಿಗಳುಮೊದಲಾದವರು ಉಪಸ್ಥಿತರಿದ್ದರು.
ಆಗಸ್ಟ್ 14ರಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಪಾದಯಾತ್ರೆ
ಉಡುಪಿ: ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳಾಗುತ್ತಿರುವ ಈ ಸುಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ಇದೇ ಆಗಸ್ಟ್ 14ರಂದು ಸಂಜೆ ಉಡುಪಿ ಕಾಂಗ್ರೆಸ್ ಭವನದಿಂದ ಸರ್ವಿಸ್ ಬಸ್ ಸ್ಟ್ಯಾಂಡ್ ಗಾಂಧಿ ಚೌಕದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರುಗಳ ಸಭೆಯಲ್ಲಿ ತಿಳಿಸಿದರು. ಸ್ವಾತಂತ್ರ್ಯ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಜನತೆ […]
ಗಣೇಶ ಚತುರ್ಥಿ, ಮೊಹರಂ ಹಬ್ಬಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಗೌರಿ ಗಣೇಶ ಹಬ್ಬ, ಮೊಹರಂ ಸೇರಿದಂತೆ ಇತರೆ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ನಿರ್ಬಂಧಗಳನ್ನು ವಿಧಿಸುವಂತೆ ಸ್ಥಳೀಯ ಆಡಳಿತಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ-ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಮೊಹರಂ ಆಚರಣೆಗೆ ಮಾರ್ಗಸೂಚಿಗಳು *ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು […]
ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದು: ಸಿಎಂ ಬೊಮ್ಮಾಯಿ
ಉಡುಪಿ: ಜಿಲ್ಲೆಯ ಜನರ ಹಲವು ದಶಕಗಳ ಬೇಡಿಕೆಯಂತೆ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಅದೇ ರೀತಿ ಸರ್ಕಾರ ಇತ್ತೀಚಿಗೆ ರೂಪಿಸಿದ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜುಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯೂ ಇದೆ. ಅದರಂತೆ ಜಿಲ್ಲೆಗೆ ಪಿಪಿಪಿ ಮಾದರಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 200 ಬೆಡ್ ಗಳ ಬಿಆರ್ ಎಸ್ ಆಸ್ಪತ್ರೆಯನ್ನು ಸರ್ಕಾರವೇ […]
ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆ ಬೇಡ: ಸಿಎಂ ಬೊಮ್ಮಾಯಿ
ಉಡುಪಿ: ಪೊಲೀಸರು ವಿಮಾನ ನಿಲ್ದಾಣ ಸಹಿತ ಸಾರ್ವಜನಿಕ ಜಾಗಗಳಲ್ಲಿ ಮುಖ್ಯಮಂತ್ರಿ, ವಿಶಿಷ್ಟ ವ್ಯಕ್ತಿಗಳಿಗೆ ಗೌರವ ವಂದನೆ (ಗಾರ್ಡ್ ಆಫ್ ಆನರ್) ಸಲ್ಲಿಸುವುದು ಬೇಡ. ಪೊಲೀಸ್ ಇಲಾಖೆ ಕಾರ್ಯಕ್ರಮಗಳಲ್ಲಷ್ಟೇ ಸಾಕು ಎಂದು ತಿಳಿಸಿದ್ದೇನೆ. ಈ ಬಗ್ಗೆ ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ನನಗೆ ಶುಭಾಶಯ ಕೋರಿ ಬ್ಯಾನರ್, ಫ್ಲಕ್ಸ್ ಗಳನ್ನು ಹಾಕಬಾರದೆಂದು ನನ್ನ ಪಕ್ಷದವರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದರು. ಹೂವಿನ ವ್ಯಾಪಾರಿಗಳ ಪ್ರತಿಭಟನೆಗೆ […]