ಸೆಪ್ಟೆಂಬರ್ ನಲ್ಲಿ 1 ರಿಂದ 8ನೇ ತರಗತಿ ಆರಂಭಿಸಲು ತೀರ್ಮಾನ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಸೆಪ್ಟೆಂಬರ್ ನಲ್ಲಿ 1 ರಿಂದ 8ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದ್ದು, ಅದರ ಪ್ರತಿಕ್ರಿಯೆಯನ್ನು ಆಧರಿಸಿ 1 ರಿಂದ 8ನೇ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು. 23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶುಕ್ರವಾರ ವಿಸ್ತೃತ ಎಸ್‌ಒಪಿ(ಪ್ರಮಾಣಿತ ಕಾರ್ಯಾಚರಣೆ ವಿಧಾನ) ಬಿಡುಗಡೆ ಮಾಡಲಾಗುವುದು ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು. 1 […]
ಉಡುಪಿ: ಗಿರಿಜಾ ಹೆಲ್ತ್ ಕೇರ್ ಸಂಸ್ಥೆಯಿಂದ ಗಾಲಿಕುರ್ಚಿ ಕೊಡುಗೆ

ಉಡುಪಿ: ರೈಲು ಅಪಘಾತದಿಂದ ಎರಡು ಕಾಲುಗಳನ್ನು ಕಳೆದುಕೊಂಡು ಎತ್ತಲೂ ಸಂಚರಿಸಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಬಾಬೀ ರಾಮ್ ಬಾಬು ಅವರಿಗೆ ಉಡುಪಿಯ ಗಿರಿಜಾ ಹೆಲ್ತ್ ಕೇರ್ ಎಂಡ್ ಸರ್ಜಿಕಲ್ಸ್ ಸಂಸ್ಥೆಯವರು ಗಾಲಿ ಕುರ್ಚಿಯನ್ನು ಉಚಿತವಾಗಿ ಒದಗಿಸಿ ಮಾನವೀಯತೆ ಮೆರೆದಿದ್ದಾರೆ. ಗಾಲಿ ಕುರ್ಚಿ ಹಸ್ತಾಂತರ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕ ರವೀಂದ್ರ ಶೆಟ್ಟಿ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಮೇಶ್ ಕಿದಿಯೂರ್, ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು. ಫಲಾನುಭವಿ ಬಾಬೀ ಅವರು ಉದ್ಯಾವರ ಕಟ್ಟೆಗುಡ್ಡೆಯ ವಸತಿ ಸಂಕೀರ್ಣದಲ್ಲಿ ಸೆಕ್ಯೂರ್ಟಿ ಗಾರ್ಡ್ […]
ಲಸಿಕೆ ಪಡೆದರೂ ಕೋವಿಡ್ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವಶ್ಯಕ: ಡಾ. ವಾಸುದೇವ ಉಪಾಧ್ಯ

ಉಡುಪಿ: ಕೊರೊನಾ ಸೋಂಕು ಬಾರದಂತೆ ಕೋವಿಡ್ ಲಸಿಕೆ ಪಡೆದರೂ ಸರಕಾರ ಸೂಚಿಸಿದ ಕೋವಿಡ್ ನಿಬಂಧನೆಗಳ ಪಾಲನೆ ಅತ್ಯಂತ ಅವಶ್ಯಕ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯ ಹೇಳಿದರು. ಕೇಂದ್ರ ಸರಕಾರ ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಕಾಳಜಿ ವಹಿಸಿ ಉಚಿತವಾಗಿ ಲಸಿಕೆ ವಿತರಣೆಯನ್ನು ಹಂತ ಹಂತವಾಗಿ ಆಯೋಜಿಸುತ್ತಿದೆ. ಸಾರ್ವಜನಿಕರು ಹಾಗೂ ಕಾರ್ಮಿಕ ವರ್ಗ ಇದರ ಪ್ರಯೋಜನವನ್ನು ಪಡೆಯಬೇಕು ಎಂದು ಅವರು ಹೇಳಿದರು. ಅವರು ಗುರುವಾರ ಉಡುಪಿ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಜಿಲ್ಲಾ ಅರೋಗ್ಯ ಇಲಾಖೆ […]
ಬೈಂದೂರು: ಪಿಕಪ್ ವಾಹನದಲ್ಲಿ ಅಕ್ರಮ ಗೋವು ಸಾಗಾಟ; ಓರ್ವನ ಬಂಧನ

ಬೈಂದೂರು: ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದನ್ನು ಮಿಂಚಿನ ಕಾರ್ಯಾಚರಣೆ ಮೂಲಕ ತಡೆದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿಯಂತೆ ಬೈಂದೂರಿನಿಂದ ವಾಹನವನ್ನು ಹಿಂಬಾಲಿಸಿದ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ಪವನ್ ನಾಯಕ್ ಮತ್ತು ಸಿಬ್ಬಂದಿ ನೇತೃತ್ವದ ತಂಡವು ಭಟ್ಕಳದಲ್ಲಿ ವಾಹನವನ್ನು ಅಡ್ಡಹಾಕಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಶಬ್ಬೀರ್( 35 ) […]
ಇನ್ಮುಂದೆ ಹೈವೇನಲ್ಲಿ ಸ್ಪೀಡ್ ಆಗಿ ವಾಹನ ಓಡಿಸಿದ್ರೆ ಬೀಳುತ್ತೇ ಭಾರೀ ದಂಡ.!

ಬೆಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಓವರ್ ಸ್ಪೀಡ್ ನಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮರಾಗಳ ಅಳವಡಿಕೆ ಮಾಡಿ ವಾಹನಗಳ ಮೇಲೆ ನಿಗಾ ವಹಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಹೆದ್ದಾರಿಗಳಲ್ಲೂ ಸಾರಿಗೆ ಇಲಾಖೆ ಕ್ಯಾಮರಾ ಅಳವಡಿಕೆ ಅಗತ್ಯ ತಯಾರಿ ನಡೆಸಿಕೊಂಡಿದೆ. ಆ ಮೂಲಕ ಕೇಂದ್ರ ಸಾರಿಗೆ ಇಲಾಖೆ ಕಠಿಣ ರೂಲ್ಸ್ ಜಾರಿ ಮಾಡಲಿದ್ದು, ವಾಹನ ಸವಾರರು ಚೂರು ಎಡವಿದರೂ ಭಾರೀ ಪ್ರಮಾಣದಲ್ಲಿ […]