ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಸೇವಾದಳದಿಂದ 75ನೇ ಸ್ವಾತಂತ್ರ್ಯೋತ್ಸವ
ಉಡುಪಿ: ಕಾಂಗ್ರೆಸ್ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗೆ ಉಳಿದಿಲ್ಲ. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದಿಂದಲೇ ಕಾಂಗ್ರೆಸ್ ಬ್ರಿಟೀಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ದೇಶ ಇಂದು ಸದೃಡಗೊಂಡಿದ್ದರೆ ಅದಕ್ಕೆ ಮೂಲ ಕಾರಣ ಕಾಂಗ್ರೆಸ್. ದೇಶ ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ. ಸರಕಾರದ ಕೋವಿಡ್ ನಿರ್ವಹಣೆಯಲ್ಲಿಯ ವೈಫಲ್ಯ, ರೈತರ ಸಮಸ್ಯೆ, ನಿರುದ್ಯೋಗ ಸಮಸ್ಯೆ ಹಾಗೂ ಬೆಲೆ ಏರಿಕೆಗಳಿಂದ ದೇಶ ತತ್ತರಿಸಿದೆ ಎಂದು ಮಾಜಿ ಸಚಿವ ವಿನಯ […]
75ನೇ ಸ್ವಾತಂತ್ರೋತ್ಸವದ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಬೃಹತ್ ವಾಹನ ಜಾಥಾ
ಉಡುಪಿ: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಇಂದು ನಗರದಲ್ಲಿ ಬೃಹತ್ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬನ್ನಂಜೆಯ ಶ್ರೀ ನಾರಾಯಣಗುರು ವೃತ್ತದಲ್ಲಿ ರಾಷ್ಟ್ರ ಧ್ವಜವನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಶಂಖ ನಾದದೊಂದಿಗೆ ಬೈಕ್ ಜಾಥಾಕ್ಕೆ ಚಾಲನೆ ನೀಡಿದರು. ಬನ್ನಂಜೆಯಿಂದ ಹೊರಟ ವಾಹನ ಜಾಥಾ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕಡಿಯಾಳಿ ಮಾರ್ಗವಾಗಿ […]
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನೆನಪಿಗೆ ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಯೋಜನೆಗಳನ್ನು ಘೋಷಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಅಮೃತ ಮಹೋತ್ಸವದ ನೆನಪಿಗೆ ಹೊಸ ಯೋಜನೆಗಳನ್ನು ಘೋಷಿಸಿದರು. ‘ಅಮೃತ ಗ್ರಾಮ ಪಂಚಾಯಿತಿ’ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಪ್ರತಿ ಮನೆಗೆ ಶುದ್ಧವಾದ ಕುಡಿಯುವ ನೀರಿನ ಪೂರೈಕೆ, ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು. ಅಮೃತ ಗ್ರಾಮೀಣ ವಸತಿ ಯೋಜನೆಯಡಿ 750 ಗ್ರಾಮ […]
ಫಿಡ್ಜ್ ನಲ್ಲಿಟ್ಟ ಆಲೂಗಡ್ಡೆ ತಿನ್ನಲೇಬೇಡಿ:ಯಾಕಂತ ಕೇಳ್ತೀರಾ, ಇಲ್ಲಿದೆ ಕಾರಣಗಳು
ಆಲೂಗಡ್ಡೆಯನ್ನು ಫ್ರಿಡ್ಜ್ನಲ್ಲಿ ಇಡುವುದು ಬಹುತೇಕ ಮಂದಿಗಳ ಅಭ್ಯಾಸ.ಆದರೆ ನೆನಪಿಡಿ ಆಲೂಗಡ್ಡೆಯನ್ನು ಫ್ರಿಡ್ಜ್ನಲ್ಲಿ ಇಡಬಾರದು. ಫ್ರಿಡ್ಜ್ನಲ್ಲಿ ಇಟ್ಟರೆ ಅದರಲ್ಲಿರುವ ಪಿಷ್ಠ, ಸಕ್ಕರೆಯಾಗಿ ಬದಲಾಗುತ್ತದೆ. ಅದನ್ನು ಸೇವಿಸಿದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುವುದು ತಜ್ಞರ ಅಭಿಮತ. ಹೌದು ಆಲೂಗಡ್ಡೆಯನ್ನು ಬಳಸುವುದಕ್ಕೆ ಕೆಲವೊಂದು ಕ್ರಮಗಳಿವೆ.ಅದ್ಯಾವುದು ಅಂತ ಹೇಳ್ತೆವೆ ಕೇಳಿ. ಆಲೂಗಡ್ಡೆಯನ್ನು ದೀರ್ಘ ಸಮಯದವರೆಗೆ ಹಾಳಾಗದಂತೆ ಇಡಲು ತುಂಬಾ ಜನರು ನಾನಾ ರೀತಿ ಪ್ರಯತ್ನಿಸುತ್ತಾರೆ. ಆದರೆ ಕೆಲವರು ಏನೇ ಮಾಡಿದರೂ ಬೇಗನೆ ಆಲೂಗಡ್ಡೆ ಹಾಳಾಗುತ್ತದೆ. ನೆನಪಿಡಿ ಆಲೂಗಡ್ಡೆಯನ್ನು ತೇವಾಂಶ ಇರುವ […]
75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ಪ್ರಮುಖಾಂಶಗಳು: -ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಣೆ. ನಾವು ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು. -ಜನ ಔಷಧಿ ಯೋಜನೆಯಿಂದಾಗಿ ಬಡವರು, ಅಗತ್ಯವಿರುವವರಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಸಿಗುತ್ತಿವೆ. 75,000 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಬ್ಲಾಕ್ ಮಟ್ಟದಲ್ಲಿ ಆಸ್ಪತ್ರೆಗಳ ಸಂಪರ್ಕದ ಕುರಿತು ಕಾರ್ಯಾಚರಿಸುತ್ತಿದ್ದೇವೆ. […]