ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್: ಲಾರ್ಡ್ಸ್ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಅಂತಿಮ ದಿನದಾಟದಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ, ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿತ್ತು.

ಕಾರ್ಕಳ: ದ ಮೋರಲ್ ಎಥಿಕ್’ ಕಿರುಚಿತ್ರ ಬಿಡುಗಡೆ

 ಕಾರ್ಕಳ: ದೃಶ್ಯ ಕಲೆಯಿಂದ ಮನಸ್ಸಿನ ಪರಿವರ್ತನೆ ಸಾಧ್ಯ. ಸಾಮಾಜಿಕ ಕಳಕಳಿಯ ನೀತಿಯುಕ್ತ ಚಲನ ಚಿತ್ರ –ಕಿರು ಚಿತ್ರಗಳು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಾಗ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು  ಪೆರ್ವಾಜೆ ಶ್ರೀ ಮೂಕಾಂಬಿಕಾ ದತ್ತಾತ್ರೇಯ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿವಾಕರ ಶೆಟ್ಟಿ ಹೇಳಿದರು. ಈ ಚಿತ್ರದ ನಿರ್ದೇಶಕ ಚಂದ್ರನಾಥ ಬಜಗೋಳಿ ಅವರ  ‘ದ ಮೋರಲ್ ಎಥಿಕ್’ ಕಿರುಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ಎರಡುವರೆ ನಿಮಿಷದ  ಕಿರುಚಿತ್ರ ಆಳವಾದ ಸಂದೇಶವನ್ನು ನೀಡುತ್ತದೆ ಮತ್ತೆ ಮತ್ತೆ ನೋಡಿಸುವ ಈ […]

ಉಡುಪಿ: ಪೆರ್ಡೂರು ನಿವಾಸಿ ನಾಪತ್ತೆ

ಉಡುಪಿ: ಇಲ್ಲಿನ ಪಕ್ಕಾಲು ಪೆರ್ಡೂರು ಗ್ರಾಮದ ಜಯಲಕ್ಷ್ಮೀ ಮನೆ ನಿವಾಸಿ ನಾಗರಾಜ ಆಚಾರ್ಯ (30) ಎಂಬವರು ಆಗಸ್ಟ್ 11 ರಂದು ಬೆಳಿಗ್ಗೆ 8.30ಕ್ಕೆ ಮನೆಯಿಂದ ತೆರಳಿದವರು ಮತ್ತೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. 5.6 ಅಡಿ ಎತ್ತರ, ಗೋದಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿರುವ ಇವರು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಉಪನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: 1,500 ಕೆ.ಜಿ.ಗೂ ಅಧಿಕ ಸ್ಫೋಟಕ ಸಾಮಗ್ರಿ ವಶ; ಓರ್ವನ ಬಂಧನ

ಮಂಗಳೂರು: ನಗರದ ಬಂದರ್ ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 1,500 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ಸಾಮಗ್ರಿಗಳನ್ನು ದಾಸ್ತಾನು ಇಟ್ಟಿದ್ದ ಘಟನೆ ಇಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ. ಆರೋಪಿಯಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೊಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬೇರಿಯಂ ನೈಟ್ರೇಟ್, […]

ಕಾಪು: ತಾಯಿ ಮಗು ನಾಪತ್ತೆ

ಉಡುಪಿ: ಮೂಳೂರು ಗ್ರಾಮದ ಮಹಿಳೆ ಶಮೀನಾ (24) ಮತ್ತು ಆಕೆಯ ನಾಲ್ಕುವರೆ ವರ್ಷದ ಮೊಹಮ್ಮದ್ ಶಾನ್ (4.5) ಆಗಸ್ಟ್ 31ರಂದು ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಶಮೀನಾ 5 ಅಡಿ ಎತ್ತರ, ಬಿಳಿ ಮೈ ಬಣ್ಣ, ದುಂಡು ಮುಖ, ಹಳದಿ ಹಾಗೂ ಬಿಳಿ ಬಣ್ಣದ ಚೂಡಿದಾರ ಮತ್ತು ಕಪ್ಪು ಬಣ್ಣದ ಬುರ್ಖಾ ಧರಿಸಿದ್ದು, ಕನ್ನಡ, ಹಿಂದಿ, ಇಂಗ್ಲೀಷ್ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಮೊಹಮ್ಮದ್ ಶಾನ್ ಗೋದಿ ಮೈಬಣ್ಣ, ದುಂಡು ಮುಖ, ಕಪ್ಪು ನೀಲಿ […]