ಕಾರ್ಕಳ: ವಿಜೇತ ವಿಶೇಷ ಶಾಲೆಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ
ಕಾರ್ಕಳ: ಇಲ್ಲಿನ ವಿಜೇತ ವಿಶೇಷ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಉಚಿತ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಿಸಲಾಯಿತು. ಕುಂದಾಪುರದ ರಕ್ಷಿತ್ ಕುಮಾರ್ ವಂಡ್ಸೆ ವಿದ್ಯಾರ್ಥಿಗಳಿಗೆ ಆರೋಗ್ಯ ಕಾರ್ಡ್ ವಿತರಿಸಿದರು. ಇದೇ ಸಂದರ್ಭದಲ್ಲಿ ಉದ್ಯಮಿ ವಿಜಯ್ ಅಯ್ಯಂಗಾರ್ ಅವರು, ಶಾಲೆಗೆ ಅವಶ್ಯಕವಿರುವ ಸುಮಾರು 20 ಸಾವಿರ ಮೌಲ್ಯದ ಅಡುಗೆ ಪಾತ್ರೆಗಳನ್ನು ದೇಣಿಗೆಯಾಗಿ ನೀಡಿದರು. ಸಂದೀಪ್ ದೇವಾಡಿಗ ಮತ್ತು ರಂಜಿತಾ ಸಂದೀಪ್ ದಂಪತಿಗಳ ಮಗು ಮಿಥಾಂಶ್ ಹೆಸರಿನಲ್ಲಿ ವಿಜೇತ ವಿಶೇಷ ಶಾಲೆಗೆ 1 ಲಕ್ಷ ದೇಣಿಗೆ ನೀಡಿದರು. ರಶ್ಮಿ ಚಾರಿಟೇಬಲ್ […]
ಶ್ರೀ ಗಾಯತ್ರೀ ಜ್ಯೋತಿಷ್ಯಾಲಯ
ಶ್ರೀ ಗಾಯತ್ರೀ ಜ್ಯೋತಿಷ್ಯಾಲಯ
ಉಡುಪಿ: ಬೋಧಕ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹಿಂದಿ ಭಾಷಾ ಶಿಕ್ಷಕರು-2(ಹಿಂದಿ ಬಿ.ಎಡ್), ಸಮಾಜ ವಿಜ್ಞಾನ ಶಿಕ್ಷಕರು-1 (ಬಿ.ಎ/ಬಿ.ಎಡ್/ಎಮ್.ಎ), ವಿಜ್ಞಾನ ಶಿಕ್ಷಕರು -2 (ಬಿ.ಎಸ್ಸಿ/ಬಿ.ಎಡ್/ಎಮ್ಎಸ್ಸಿ) ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನಿಗದಿತ ದಾಖಲೆಗಳೊಂದಿಗೆ ಆಗಸ್ಟ್ 26ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, […]
ಉಡುಪಿ: ದಿನಕ್ಕೆ ಕನಿಷ್ಠ 10,000 ಕೋವಿಡ್ ಟೆಸ್ಟಿಂಗ್ ನಡೆಸಿ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10000 ರಿಂದ 12000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ […]
ಕಾರ್ಕಳ: ಲವ್ ಜಿಹಾದ್, ಉಗ್ರಗಾಮಿ ಚಟುವಟಿಕೆಯ ವಿರುದ್ಧ ಹಿಂದು ಜಾಗರಣ ವೇದಿಕೆ ಪ್ರತಿಭಟನೆ
ಕಾರ್ಕಳ: ಲವ್ ಜಿಹಾದ್ ಮತ್ತು ಉಗ್ರಗಾಮಿ ಚಟುವಟಿಕೆಯ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಕಳ ಘಟಕದ ವತಿಯಿಂದ ತಾಲೂಕು ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆ ಜಮಾಯಿಸಿದ್ದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಲವ್ ಜಿಹಾದ್ ಹಾಗೂ ಭಯೋತ್ಪಾದಕರ ವಿರುದ್ಧ ಧಿಕ್ಕಾರ ಕೂಗಿದರು. ಲವ್ ಜಿಹಾದ್ ವಿರುದ್ಧ ಕಠಿಣ ಕಾಯ್ದೆ ಮತ್ತು ಕರಾವಳಿ ತೀರದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಚಟುವಟಿಕೆಯನ್ನು ಹತ್ತಿಕ್ಕಲು ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪಿಸಲು ಆಗ್ರಹಿಸಿದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಮೂಲಕ […]