“ರಾಮಾಚಾರಿ ವೆಡ್ಸ್ ಮಾರ್ಗರೆಟ್ಸ್ ” ಇನ್ನೊಬ್ಬ ಜೂನಿಯರ್ ರಾಮಾಚಾರಿ ಹೊಸ ಕಥೆ”
ರಾಮಾಚಾರಿ ಅಂದ್ ತಕ್ಷಣ ನಮ್ಗ್ ನೆನ್ಪ್ ಆಗೋದು ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರ. ಅಲ್ಲಿಂದ ಹೊಸ ಹುರುಪನ್ನ ಪಡೆದುಕೊಂಡ ಈ ಹೆಸರಿಗೆ ಕ್ರೇಜಿ ಸ್ಟಾರ್ ರವಿಚಂದ್ರನ್ ನಂತರ ರಾಕಿಂಗ್ ಸ್ಟಾರ್ ಯಶ್ ಕೂಡ ಸೇರ್ಪಡೆಯಾಗ್ತಾರೆ.ಇವಾಗ ಈ ಸಾಲಿಗೆ ಕುಂದಾಪುರದ ಕಲತ್ವ ಮತ್ತು ಸಿರಿ ತಂಡದ ” ರಾಮಾಚಾರಿ ವೆಡ್ಸ್ ಮಾರ್ಗರೆಟ್ಸ್ ” ಸೇರ್ಪಡೆಯಾಗಿದೆ. ಹೌದು ವನಸ್ತಾ ಆಗ್ರೋ ಫುಡ್ಸ್ ರವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಟೀಮ್ ಕಲತ್ವ ಹಾಗೂ ಸಿರಿ ತಂಡದ ಹೊಚ್ಚ ಹೊಸ ಕನ್ನಡ, […]
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಜಿಲ್ಲಾಮಟ್ಟದ ಪ್ರತಿನಿಧಿಗಳ ಸಭೆ
ಉಡುಪಿ: ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆಶ್ರಯದಲ್ಲಿ “ಜಿಲ್ಲಾ ಮಟ್ಟದ ಪ್ರತಿನಿಧಿಗಳ ಸಭೆ” ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಇಂದು ನಡೆಯಿತು. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿದ ರಾಜ್ಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಅಧ್ಯಕ್ಷ ನಾರಾಯಣ ಸ್ವಾಮಿ ಅವರು, ಪಂಚಾಯತ್ ರಾಜ್ಯ ವ್ಯವಸ್ಥೆಯ ಮೂರು ಸ್ತರಗಳಲ್ಲಿ ಜಾತಿ ಮೀಸಲಾತಿ, ಒಳ ಮೀಸಲಾತಿ, ಅಧ್ಯಕ್ಷರಾಗುವ […]
ಆಫ್ಗನ್ ಮಾಜಿ ಅಧ್ಯಕ್ಷ ಘನಿಯನ್ನು ಭಾರತಕ್ಕೆ ಆಹ್ವಾನಿಸಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ಅಮೆರಿಕ ಪಡೆ ಅಫ್ಗಾನಿಸ್ತಾನದಿಂದ ಹಂತ ಹಂತವಾಗಿ ಕಾಲ್ಕೀಳುತ್ತಿದ್ದಂತೆ ತಾಲಿಬಾನ್ ತನ್ನ ಪ್ರಭಾವನ್ನು ವೃದ್ಧಿಸಿಕೊಂಡಿದ್ದು, ತಾಲಿಬಾನ್ ಪಡೆ ಅಫ್ಗಾನಿಸ್ತಾನ ರಾಜಧಾನಿ ಕಾಬೂಲ್ಅನ್ನು ವಶ ಪಡಿಸಿಕೊಂಡ ಬೆನ್ನಲ್ಲೇ ಅಶ್ರಫ್ ಘನಿ ದೇಶ ತೊರೆದು ಪಲಾಯನಗೈದಿದ್ದರು. ಇದೀಗ ಯುಎಇನಲ್ಲಿ ಅಶ್ರಫ್ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಇದೀಗ ಅಫ್ಗಾನುಸ್ತಾನದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಅಫ್ಗಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಅವರನ್ನು ಭಾರತಕ್ಕೆ ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ. ಭಾರತದಲ್ಲಿ ನೆಲೆಸಲು ಅಶ್ರಫ್ ಘನಿ ಅವರಿಗೆ ಅವಕಾಶ […]
ಉಡುಪಿ: ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ; ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
ಉಡುಪಿ: ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕೊರೊನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ. ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕೊರೊನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ […]
ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವರಾಹಿ ಮತ್ತು ಸೌಪರ್ಣಿಕ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದೆ. ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ, […]