ಆ.21ಕ್ಕೆ ಕಾರ್ಕಳ ಜ್ಞಾನಸುಧಾದಲ್ಲಿ ಬೃಹತ್ ರಕ್ತದಾನ ಶಿಬಿರ
ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ದಿ. ಗೋಪಾಲ ಶೆಟ್ಟಿಯವರ ಜನ್ಮ ಶತಾಬ್ದಿ ಅಂಗವಾಗಿ ಉಡುಪಿ ಅಜ್ಜರಕಾಡು ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಆವರಣದಲ್ಲಿ ಆ. 21ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯ ತನಕ ರಕ್ತದಾನ ಶಿಬಿರ ನಡೆಯಲಿದೆ. ಆಸಕ್ತ ರಕ್ತದಾನಿಗಳು ರಕ್ತದಾನ ಮಾಡಲು ಹೆಸರು ನೋಂದಾಯಿಸುವಂತೆ ಸಂಸ್ಥೆ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 81474 54902 ಸಂಪರ್ಕಿಸಬಹುದಾಗಿದೆ. ವೀಲ್ ಚೇರ್ ವಿತರಣೆ ಅದೇ […]
ಉಡುಪಿ: ಭತ್ತದ ಗದ್ದೆಯಲ್ಲಿ ಕಳೆ ಕಿತ್ತ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗುರುವಾರ ಕಡೆಕಾರು ಗ್ರಾಮದಲ್ಲಿ ರೈತ ಮಹಿಳೆಯರೊಂದಿಗೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತರು. ಕೇದಾರೋತ್ಥಾನ ಟ್ರಸ್ಟ್‌ನಿಂದ ಉಡುಪಿ ತಾಲ್ಲೂಕಿನಾದ್ಯಂತ ಹಡಿಲುಭೂಮಿ ಕೃಷಿ ಆಂದೋಲನ ನಡೆಸಲಾಗುತ್ತಿದ್ದು, 1,500 ಎಕರೆಗೂ ಹೆಚ್ಚು ಹಡಿಲುಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ. ಕಡೆಕಾರ್ ಗ್ರಾಪಂ ವ್ಯಾಪ್ತಿಯಲ್ಲಿ 140 ಎಕರೆ ಹಡಿಲು ಭೂಮಿಯಲ್ಲಿ ನಾಟಿ ಮಾಡಲಾಗಿದ್ದು, ಇದರ ಪೈರಿನ ನಡುವೆ ಬೆಳೆದ ಕಳೆ ತೆಗೆಯುವ ಕಾರ್ಯದಲ್ಲಿ ಸಚಿವೆ ಶೋಭಾ ಕರಂದ್ಲಾಜೆ […]
ಉಡುಪಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ; ಹಿರಿಯ ಕೃಷಿಕರಿಗೆ ಸನ್ಮಾನ
ಉಡುಪಿ: ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನು ಸನ್ಮಾನಿಸುವ ಸತ್ಕಾರ್ಯಕ್ಕೆ […]