ಉಡುಪಿ: 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಗುರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವುದರ ಮೂಲಕ ಹಿರಿಯ ವ್ಯಕ್ತಿಗಳು ಕೋವಿಡ್ ಗೆ ಬಲಿಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಜಿಲ್ಲಾ ಪರಿಣಿತರ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮೊದಲೇ ಡೋಸ್ ಪಡೆದು ಎರಡನೇ ಡೋಸ್ ಬಾಕಿಯಿರುವ ಹಿರಿಯ ನಾಗರಿಕರ ವಿವರಗಳನ್ನು ಪಡೆದು ಅವರಿಗೆ […]

ಕುಂದಾಪುರ: ಬಿಜೆಪಿ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಇಂದು ಕಂಡ್ಲೂರು ಕನ್ನಿಕಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಇನ್ನಿತರ ಜಿಲ್ಲಾ ನಾಯಕರು ಭಾಗವಹಿಸಿದ್ದರು.

ಜ್ಞಾನಸುಧಾ ಕಾಲೇಜಿನಲ್ಲಿ  ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮ

ಕಾರ್ಕಳ: ಶಿಕ್ಷಣ ನಮಗೆ ಜ್ಞಾನ, ಧೈರ್ಯ, ಮಾರ್ಗದರ್ಶನ, ನೌಕರಿಯನ್ನು ನೀಡುತ್ತದೆ. ಆದರೆ ಇಂದು ವಿದ್ಯಾರ್ಥಿಗಳು ತಮ್ಮ ಪೋಷಕ, ಶಿಕ್ಷಕರನ್ನು ಗೌರವಿಸದಿರುವುದು ವಿಷಾದನೀಯ ಸಂಗತಿ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ  ಬಿ.ಸದಾಶಿವ ಪ್ರಭು ನುಡಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ, ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಗೋಪಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀವನ ಮೌಲ್ಯಗಳನ್ನು ಸಮಗ್ರವಾಗಿ ಅಳವಡಿಸಿಕೊಂಡು ಜೀವನದ ಸಮಗ್ರ ಅಭಿವೃದ್ದಿಯ ಕನಸು ಕಾಣಲು, ಜ್ಞಾನಸುಧಾ […]

ಉಡುಪಿ: ಖಾಸಗಿ ಆಸ್ಪತ್ರೆಗಳು ಕೋವಿಡ್ ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು; ಡಿಸಿ ಜಗದೀಶ್ ಸೂಚನೆ

ಉಡುಪಿ: ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪರೀಕ್ಷೆಯನ್ನು ಹೆಚ್ಚುಗೊಳಿಸಲಾಗಿದ್ದು, ಸ್ವಾಬ್ ಸಂಗ್ರಹಿಸಿದ 24 ಗಂಟೆಯೊಳಗೆ ವರದಿ ನೀಡಲು ಕ್ರಮಕೈಗೊಳ್ಳಬೇಕು. ಲ್ಯಾಬ್ ನಲ್ಲಿ ಪರೀಕ್ಷಾ ವರದಿ ನೀಡಲು ವಿಳಂಬವಾದಲ್ಲಿ, ಪಕ್ಕದ ಜಿಲ್ಲೆಗಳಿಗೆ ಸ್ವಾಬ್ ಕಳುಹಿಸಿ ನಿಗದಿತ ಅವಧಿಯೊಳಗೆ ವರದಿ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಪ್ರದೇಶದಲ್ಲಿ ಪಾಸಿಟಿವ್ ಬಂದ ವ್ಯಕ್ತಿಯು ವಾಸಿಸುವ 100ಮೀ ಪ್ರದೇಶದಲ್ಲಿ ಹಾಗೂ […]

ಮಣಿಪಾಲ: ‘ರೋಟರಿ- ಮಾಹೆ ಸ್ಕಿನ್ ಬ್ಯಾಂಕ್’ ಉದ್ಘಾಟನೆ

ಮಣಿಪಾಲ: ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ (ಚರ್ಮ ನಿಧಿ) ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟನೆಗೊಂಡಿತು. ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಪಾಲುದಾರಿಕೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ರೋಟರಿ ಮಾಹೆ ಸ್ಕಿನ್ ಬ್ಯಾಂಕ್’ ” ಅನ್ನು ಸ್ಥಾಪಿಸಲಾಗಿದೆ. ರೋಟರಿ ಕ್ಲಬ್ ಮಣಿಪಾಲ್ ಟೌನ್ ಉಪಕರಣಗಳನ್ನು ಖರೀದಿಸಲು ರೋಟರಿ ಫೌಂಡೇಶನ್‌ನ ಜಾಗತಿಕ ಅನುದಾನ ಕಾರ್ಯಕ್ರಮದಡಿ 83 ಲಕ್ಷ ರೂಪಾಯಿಗಳನ್ನು ನೀಡಿತ್ತು. ಹಾಗೆ ಅವಶ್ಯಕ ಮೂಲಸೌಕರ್ಯಗಳಿಗೆ ಮಾಹೆ 50 ಲಕ್ಷ ರೂಪಾಯಿಗಳನ್ನು […]