ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ

ಉಡುಪಿ: 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿದ್ದಾರೆ. ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ನ ಗೌರವಾಧ್ಯಕ್ಷರಾದ ಡಾ. ನಿ.ಬೀ. ವಿಜಯ ಬಲ್ಲಾಳ್ ಅವರು […]
ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ: ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ

ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ವತಿಯಿಂದ ಭಾನುವಾರ ಸ್ವಚ್ಛತೆ ಸೇರಿದಂತೆ ವಿವಿಧ ಕಾರ್ಯಗಳನ್ನು ನಡೆಸಲಾಯಿತು. 4 ಹುಲ್ಲು ಕಟ್ಟಿಂಗ್ ಮಿಷನ್ ಮೂಲಕ ಗರ್ಡೆ ಪರಿಸರದ ಎಲ್ಲಾ ಮಾರ್ಗಗಳನ್ನು ಶುಚಿತ್ವ ಮಾಡುವ ಕಾರ್ಯ ನಡೆಯಿತು. 98ನೇ ಶ್ರಮದಾನ ಕಾರ್ಯಕ್ರಮದ ಮೂಲಕ 1ನೇ ಕ್ರಾಸ್ ಗರ್ಡೆ, 2ನೇ ಕ್ರಾಸ್ ಗರ್ಡೆ, 3ನೇ ಕ್ರಾಸ್ ಗರ್ಡೆ, 4ನೇ ಕ್ರಾಸ್ ಗರ್ಡೆ, 5ನೇ ಕ್ರಾಸ್ ಗರ್ಡೆ ಹಾಗೂ ಲಕ್ಷ್ಮೀನಗರ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು. ನಗರಸಭಾ ಸದಸ್ಯ ವಿಜಯ್ ಕೊಡವೂರು ಸ್ವಚ್ಛತಾ […]
ಜ್ಞಾನಸುಧಾ ತಾಲೂಕಿಗೊಂದು ಗೌರವ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಹುಟ್ಟುಹಬ್ಬವನ್ನು ಅವರವರ ಇಚ್ಚೆಗೆ ಆಚರಿಸುವುದನ್ನು ನಾವು ನೋಡಿದ್ದೇವೆ. ಆದರೆ ಜ್ಞಾನಸುಧಾ ಸಂಸ್ಥಾಪಕರ ಹುಟ್ಟುಹಬ್ಬವನ್ನು ಹತ್ತಾರು ಸಮಾಜಮುಖಿ ಚಟುವಟಿಕೆಯ ಮೂಲಕ ಆಚರಿಸುತ್ತಿರುವುದು ಅತ್ಯಂತ ಪ್ರಶಂಸನೀಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಗೋಪಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ – ಸ್ನೇಹಕೂಟ ಹಾಗೂ ಅಟಲ್‍ಟಿಂಕರಿಂಗ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತಃಕರಣ ಶುದ್ಧವಿದ್ದಾಗ ಮಾತ್ರ ಇಂತಹ ಸಮಾಜಮುಖಿಕಾರ್ಯ ಮಾಡಲು ಸಾಧ್ಯ. ಪೋಷಕರ […]
ಆ. 23ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಅಜೆಕಾರು ಶಾಖೆಯ ಸ್ಥಳಾಂತರ ಸಮಾರಂಭ

ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ) ಅಜೆಕಾರು ಶಾಖೆಯು ಅಜೆಕಾರು ಮುಖ್ಯ ರಸ್ತೆಯಲ್ಲಿರುವ ಗಣೇಶ್ ಟ್ರೇಡ್ ಸೆಂಟರ್‌ನ ನೆಲ ಮಹಡಿಗೆ ಸ್ಥಳಾಂತರಗೊಳ್ಳಲಿದ್ದು, ಇದರ ಉದ್ಘಾಟನಾ ಸಮಾರಂಭ ಇದೇ ಆ.23ರಂದು 10.30ಕ್ಕೆ ನಡೆಯಲಿದೆ. ನೂತನ ಸ್ಥಳಾಂತರ ಶಾಖೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ […]
ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ಧೂರಿ ಸ್ವಾಗತ

ಉಡುಪಿ: ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಭೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ಸಚಿವೆ […]