ಉಡುಪಿ: ಶತಾಯುಷಿ ಡೋಲು ಕಲಾವಿದ ಗುರುವ ಕೊರಗ ಇನ್ನಿಲ್ಲ

ಉಡುಪಿ: ಶತಾಯುಷಿ ಡೋಲು (ಕಡ್ಡಾಯಿ) ಕಲಾವಿದ ಗುರುವ ಕೊರಗ (105) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನ ಹೊಂದಿದರು. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ 105 ವರ್ಷ ವಯಸ್ಸಿನ ಗುರುವ ಕೊರಗ ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ಡೋಲು ಕಲಾವಿದ ಹಿರಿಯಡ್ಕದ ತೋಮ ಮತ್ತು ತುಂಬೆ ದಂಪತಿ ಪುತ್ರರಾಗಿರುವ ಇವರು, 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಇವರ ಸಾಧನೆಗೆ 2018ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2017ನೆ ಸಾಲಿನ […]
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

ಲಖನೌ: ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ್ ಸಿಂಗ್ (89) ಶನಿವಾರ ರಾತ್ರಿ ನಿಧನ ಹೊಂದಿದರು. ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆ ತಿಳಿಸಿದೆ. ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ನಂತರ ಅವರು […]
ಕೋವಿಡ್ ಪಾಸಿಟಿವಿಟಿ ದರ ಹೆಚ್ಚಳ: ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಸದ್ಯಕ್ಕಿಲ್ಲ ಶಾಲೆ ಪುನರಾರಂಭ

ಉಡುಪಿ: ಕೋವಿಡ್ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ನಾಳೆ (ಆ.23) ಯಿಂದ 9ನೇ ತರಗತಿಯಿಂದ ಪಿಯುಸಿವರೆಗಿನ ತರಗತಿಗಳು ಆರಂಭವಾಗುತ್ತಿದೆ. ಆದರೆ, ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 2ಕ್ಕಿಂತ ಹೆಚ್ಚಿರುವುದರಿಂದ ಸದ್ಯ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭವಾಗುವುದಿಲ್ಲ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲೆಯಲ್ಲಿ ನಾಳೆಯಿಂದ ಶಾಲಾ ಕಾಲೇಜುಗಳನ್ನು ಆರಂಭವಾಗುವುದಿಲ್ಲ. ಜಿಲ್ಲೆಯಲ್ಲಿ ಸದ್ಯ ಕೋವಿಡ್ ಪಾಸಿಟಿವಿಟಿ ದರ ಶೇ. 2.5ರಷ್ಟಿದ್ದು, ಅದು ಶೇ.2ಕ್ಕಿಂತ ಕೆಳಗಿಳಿದ ಬಳಿಕವೇ ಶಾಲೆಗಳನ್ನು […]