ಕಾಪು ಯುವಮೋರ್ಚಾದಿಂದ ಸಚಿವ ಸುನಿಲ್ ಕುಮಾರ್ ಗೆ ಸನ್ಮಾನ
ಕಾಪು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಕಾಪು ಬಿಜೆಪಿ ಕಚೇರಿಗೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಅಧ್ಯಕ್ಷ ಸಚಿನ್ ಸುವರ್ಣ ಅವರ ನೇತೃತ್ವದಲ್ಲಿ ನೂತನ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, […]
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತ ಆಚರಿಸುತ್ತಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಭೇಟಿಯಾಗಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಕೃಷ್ಣ ದೇವರು ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳು ಮತ್ತು ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರ್ಶನವನ್ನೂ ಪಡೆದರು.
ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಲು ಚಿಂತನೆ: ಸಚಿವ ವಿ. ಸುನೀಲ್ ಕುಮಾರ್
ಉಡುಪಿ: ಬಿಲ್ಲವ ಸಮುದಾಯದ ಅಭಿವೃದ್ದಿಗಾಗಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ದಿ ನಿಗಮ ಆರಂಭಿಸುವ ಚಿಂತನೆ ಇದೆ ಎಂದು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಮುದಾಯಕ್ಕೆ ಆರ್ಥಿಕ ಚೇತನ ನೀಡಲು ನಾರಾಯಣ ಗುರು ಅಭಿವೃದ್ಧಿ ನಿಗಮ ಆರಂಭಿಸಿ, ಅದರಂತೆ ಕಾರ್ಯಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ನಾರಾಯಣ ಗುರುಗಳ ಆದರ್ಶ ಚಿಂತನೆಗಳು ಅರ್ಥಪೂರ್ಣವಾದುದು: ಸಚಿವ ವಿ. ಸುನಿಲ್ ಕುಮಾರ್
ಉಡುಪಿ: ರಾಜ್ಯಮಟ್ಟದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ನಾರಾಯಣ ಗುರುಗಳ ಆದರ್ಶ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಿಲ್ಲಾಡಳಿತ, ಬಿಲ್ಲವ ಸೇವಾ ಸಂಘ ಇವರ ಸಂಯುಕ್ತಾಶ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿಯ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ […]
ಕಾರ್ಕಳ: ಎಸ್ ಸಿಡಿಸಿಸಿ ಬ್ಯಾಂಕ್ ಅಜೆಕಾರು ಶಾಖೆಯ ಸ್ಥಳಾಂತರ ಸಮಾರಂಭ
ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ) ಅಜೆಕಾರು ಶಾಖೆಯ ಸ್ಥಳಾಂತರ ಸಮಾರಂಭವು ಅಜೆಕಾರು ಪ್ರಗತಿ ಟ್ರೇಡ್ ಸೆಂಟರ್ ನಲ್ಲಿ ಇಂದು ನಡೆಯಿತು. ನೂತನ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿ ಇಂಧನ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ, ರೈತರ ಸಾಲ ಮನ್ನಾದಂತಹ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು, ಶೂನ್ಯ ಬಡ್ಡಿದರದಲ್ಲಿ ಸಾಲಯೋಜನೆಗಳು ನೀಡುತ್ತಿವೆ. ಕೇಂದ್ರ ಸರಕಾರ ಸಹಕಾರ ಸಚಿವಾಲಯವನ್ನು ಸ್ಥಾಪಿಸುತ್ತಿದೆ. ಹೊಸ ಚಿಂತನೆಗಳಿಗೆ ಹೊಸ […]