ಕಾರ್ಕಳ: ಬಿಜೆಪಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ
ಕಾರ್ಕಳ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಯ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಈ ಕೆಳಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಹೆಬ್ರಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾಗಿ ಸುರೇಂದ್ರ ವರಂಗ, ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಂದ್ರ ಚಾರ ಹಾಗೂ ಸಂದೇಶ್ ಆಚಾರ್ಯ, ನಿಟ್ಟೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಅಮೀನ್ ಪ್ರಧಾನ ಕಾರ್ಯದರ್ಶಿಯಾಗಿ ಹಂಸರಾಜ್ ಶೆಟ್ಟಿ, ಕುಕ್ಕುಂದೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಪ್ರಭು. ಮುಡಾರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಜತ್ ರಾಮಮೋಹನ್ […]
ಉಡುಪಿ: ಹಿರಿಯ ಸಾಹಿತಿ ಡಾ. ಉಪ್ಪಂಗಳ ರಾಮಭಟ್ ಇನ್ನಿಲ್ಲ
ಉಡುಪಿ: ಕನ್ನಡದ ಹಿರಿಯ ಸಾಹಿತಿ, ವಿದ್ವಾಂಸ ಡಾ. ಉಪ್ಪಂಗಳ ರಾಮಭಟ್ (81) ಅವರು ಇಂದು ನಿಧನ ಹೊಂದಿದರು. ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಇವರು ಕಳೆದ ನಾಲೈದು ದಶಕಗಳಿಂದ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಸಂಶೋಧನೆ, ವಿಮರ್ಶೆ, ಮುಕ್ತಕ ಕವನ ರಚನೆ, ಪ್ರವಾಸ, ನಾಟಕ, ಜೀವನ ಚಿತ್ರಣ, ಅನುವಾದ, ವರ್ತಮಾನ ಸಾಮಾಜಿಕ ಸಮಸ್ಯೆಗಳು ಮೊದಲಾದ ವಿಚಾರಗಳಲ್ಲಿ ಲೇಖನ, ಕೃತಿ ರಚನೆ ಮಾಡಿದ್ದಾರೆ. ಕನ್ನಡ ವ್ಯಾಕರಣ, ಗಡಿನಾಡು ತುಳುನಾಡಿನ ಕುರಿತಾದ ಅವರ ಮೌಲಿಕ ಸಂಶೋಧನೆಗಳು ವಿದ್ವಾಂಸರ […]
ಗ್ರಾಹಕರಿಗೆ ಹೊಸ ಕಾರು ಪರಿಚಯಿಸಲು ಮುಂದಾಗಿದೆ ಮಾರುತಿ ಸುಜುಕಿ: ಇದಕ್ಕೆ ಪೆಟ್ರೋಲ್, ಡಿಸೇಲ್ ಹಾಕಬೇಕಾಗಿಲ್ಲ; ಚಾರ್ಜ್ ಕೂಡ ಮಾಡಬೇಕಿಲ್ಲ.!
ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯ ಬೆನ್ನಲ್ಲೇ ವಿವಿಧ ಕಂಪೆನಿಗಳ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಗೆ ಪ್ರವೇಶಿಸುತ್ತಿವೆ. ಆದರೆ, ರಸ್ತೆಗಿಳಿದಿರುವ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳಲು ಸೂಪರ್ ಫಾಸ್ಟ್ ಚಾರ್ಜಿಂಗ್ ಸ್ಟೇಷನ್ಗಳಿಲ್ಲ ಎಂಬ ಕೊರಗು ಗ್ರಾಹಕರಲ್ಲಿದೆ. ಈ ಕೊರಗನ್ನು ಮನಗಂಡಿರುವ ಮಾರುತಿ ಸುಜುಕಿ ಕಂಪೆನಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರವೊಂದನ್ನು ಪರಿಚಯಿಸಲು ಮುಂದಾಗಿದೆ. ಈ ಕಾರಿನ ವಿಶೇಷತೆ ಎಂದರೆ ಇದಕ್ಕೆ ಪೆಟ್ರೋಲ್-ಡೀಸೆಲ್ ಬೇಕಿಲ್ಲ. ಹಾಗೆಯೇ ಚಾರ್ಜ್ ಕೂಡ ಮಾಡಬೇಕಿಲ್ಲ. ಹಾಗಾದ್ರೆ ಈ ಕಾರು ಹೇಗೆ ಚಲಿಸುತ್ತದೆ ಎಂಬ ಪ್ರಶ್ನೆ ನೀವು […]
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ
ಮಣಿಪಾಲ: ಅಸೋಸಿಯೇಷನ್ ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ ಇಂಡಿಯಾ (ಎಎಚ್‌ಪಿಐ)ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆ ಪಡೆದುಕೊಂಡಿದೆ. ಕೆಎಂಸಿ ಆಸ್ಪತ್ರೆಯ ಡೀನ್ ಡಾ. ಶರತ್ ಕೆ ರಾವ್ ಅವರು ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಸಿ.ಜಿ. ಮುತ್ತಣ, ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮತ್ತು ಗುಣಮಟ್ಟ ಅನುಷ್ಠಾನದ ಸಲಹೆಗಾರ ಡಾ. ಸುನೀಲ್ ಸಿ ಮುಂಡ್ಕೂರ್ ಉಪಸ್ಥಿತರಿದ್ದರು. ಅಸೋಸಿಯೇಷನ್ […]
ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ‘ವ್ಯಾಕ್ಸಿನೇಟ್ ಇಂಡಿಯಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ 2.5 ರಿಂದ 4 ಲಕ್ಷ ಜನರಿಗೆ ಪ್ರತಿ ದಿನ ನೀಡಲಾಗುತ್ತಿದೆ. 1.5 ಕೋಟಿ ಡೋಸ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದರು.