ದ.ಕ ವಿಶ್ವಕರ್ಮ ಒಕ್ಕೂಟದ ಕಾರ್ಯಕಾರಿ ಸಮಿತಿಗೆ ಹರ್ಷವರ್ಧನ್ ನಿಟ್ಟೆ ನೇಮಕ
ಕಾರ್ಕಳ: ಪ್ರಸ್ತುತ ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೊಷ್ಠದ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಹರ್ಷವರ್ಧನ್ ನಿಟ್ಟೆ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಕಾರ್ಯಕಾರಿ ಸಮಿತಿಯ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣ ಅವರ ತಾಯಿ ಪುಷ್ಪಾವತಿ ಆನಂದ ಪುತ್ರನ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜನಾನುರಾಗಿಯಾಗಿದ್ದ ಪುಷ್ಪಾವತಿ ಆನಂದ ಪುತ್ರನ್ ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಂಕನಿಡಿಯೂರು ಗ್ರಾಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಬೀಳ್ಕೊಡುಗೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗೋಪಾಲ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರಿಗೆ ಪಂಚಾಯತ್ ಸದಸ್ಯರಿಂದ ಸನ್ಮಾನಿಸಿ ಬೀಳ್ಕೋಡಲಾಯಿತು. ಇದೇ ವೇಳೆ ನೂತನ ಪಿಡಿಓ ಆಗಿ ಅಧಿಕಾರ ಸ್ವೀಕರಿಸಿದ ಸುರೇಶ್ ಕೆ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಧನಂಜಯ ಕುಂದರ್, ಪಂಚಾಯತ್ ಸದಸ್ಯರಾದ ಪ್ರಖ್ಯಾತ್ ಶೆಟ್ಟಿ, ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್ ಮೀನಾ ಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ವೆಂಕಟೇಶ್ ಕುಲಾಲ್, […]
ಮಣಿಪಾಲ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ದನ
ಮಣಿಪಾಲ: ರಸ್ತೆ ದಾಟುತ್ತಿದ್ದ ದನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದನವು ಮೂರು ಕಾಲುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲದ ಈಶ್ವರನಗರದ ಪೆಟ್ರೋಲ್ ಬಂಕ್ ಬಳಿ ಇಂದು ಸಂಜೆ ಸಂಭವಿಸಿದೆ. ಮಣಿಪಾಲದಿಂದ ಪರ್ಕಳದ ಕಡೆ ತೆರಳುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರಿನ ಚಾಲಕ ಅತೀ ವೇಗವಾಗಿ ಬಂದು ರಸ್ತೆ ದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ದನ ರಸ್ತೆ ಬದಿಗೆ ಬಂದು ಬಿದ್ದಿದೆ. ಘಟನೆಗೆ ಕಾರು ಚಾಲಕನ ಅತೀ ವೇಗದ ಚಾಲನೆಯೇ ಕಾರಣ ಎಂದು […]
ಕಾರ್ಕಳ: ಸಚಿವರ ಸಭೆಯಲ್ಲಿ ಮಾಜಿ ಶಾಸಕ ಗೋಪಾಲ್ ಭಂಡಾರಿಗೆ ಅವಮಾನ; ಕೂಡಲೇ ಕ್ಷಮೆ ಕೇಳುವಂತೆ ಶುಭದ ರಾವ್ ಆಗ್ರಹ
ಕಾರ್ಕಳ: ಇಲ್ಲಿನ ಮಾರ್ಕೆಟ್ ಉಚ್ಚಂಗಿ ನಗರದ ರಣವೀರ ಕಾಲನಿಯಲ್ಲಿ ನಡೆದ ಸಚಿವರ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಬಗ್ಗೆ ಉದ್ಯಮಿಯೊಬ್ಬರು ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರು ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಾವೂ ನಿಮ್ಮ ಭಾಷೆಯಲ್ಲಿಯೇ ಉತ್ತರ ಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ, ಪುರಸಭಾ ಸದಸ್ಯ ಶುಭದ ರಾವ್ ಎಚ್ಚರಿಕೆ ನೀಡಿದ್ದಾರೆ. ಗೋಪಾಲ್ ಭಂಡಾರಿವಯರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲದವರಿಂದ ಮಾತ್ರ ಇಂತಹ ಮಾತು ಬರಲು ಸಾಧ್ಯ. ಕಾರ್ಕಳ ಕ್ಷೇತಕ್ಕೆ ಭಂಡಾರಿಯವರ ಕೊಡುಗೆ […]