ಅಲೆವೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಅಲೆವೂರು: ಇಲ್ಲಿನ ಪಡುಅಲೆವೂರು ದುರ್ಗಾನಗರ ಎಂಬಲ್ಲಿ ಭಾನುವಾರ ಎರಡು ಬೈಕ್ ಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾನೆ. ಮೃತನನ್ನು ಅಲೆವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ನಿತಿನ್ ಕುಂದರ್ (24) ಎಂದು ಗುರುತಿಸಲಾಗಿದೆ. ಈತ ಎಲೆಕ್ಟ್ರಿಷನ್, ಡ್ರೈವಿಂಗ್ ವೃತ್ತಿ ಮಾಡುತ್ತಿದ್ದನು ಎನ್ನಲಾಗಿದೆ. ಭಾನುವಾರ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಇದರಿಂದ […]

ಅಲೆವೂರು: ದಾನಿಗಳಿಂದ ಸುಬೋಧಿನೀ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಅಲೆವೂರು: ಅಲೆವೂರು ಸುಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾನಿಗಳಿಂದ ಕೊಡಮಾಡಲ್ಪಟ್ಟ ₹20 ಸಾವಿರ ಮೌಲ್ಯದ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ದಾನಿಗಳಾದ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ ವೈ. ಕರುಣಾಕರ ಶೆಟ್ಟಿ, ರಜನಿಕಾಂತ್ ತಂತ್ರಿ, ಉದ್ಯಮಿ ಕಿರಣ್ ಕುಮಾರ್, ನಾಗರಾಜ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ವರಿಜಾ ಸುಂದರ ಶೆಟ್ಟಿ, ನಿವೃತ್ತ ಶಿಕ್ಷಕ ವಸಂತ ಶೆಟ್ಟಿ, ನಿವೃತ್ತ ಮುಖ್ಯ […]