ಕುಂದೇಶ್ವರ: 552 ಜನರಿಗೆ ಕೋವಿಶೀಲ್ಡ್ ಲಸಿಕೆ

ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ಸಭಾ ಭವನದಲ್ಲಿ ಶುಕ್ರವಾರ 552 ಜನರಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಯಿತು. 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಡೋಸ್ ಹಾಗೂ ಮೊದಲ ಡೋಸ್ ಪಡೆದು 84 ದಿನ ಆದವರಿಗೆ ಎರಡನೇ ಡೋಸ್ ಲಸಿಕೆ ಹಾಕಲಾಯಿತು. ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲಾ ಗ್ರಾಮಸ್ಥರಿಗೂ, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತರು ಹಾಗೂ ಸ್ವಯಂ ಸೇವಕರಿಗೆ ಕುಂದಾಪುರ 10ನೇ ವಾರ್ಡ್ ಪುರಸಭೆ ಸದಸ್ಯ ಪ್ರಭಾಕರ್ ವಿ. ಅವರು ಹೃದಯ ಪೂರ್ವಕ ವಂದನೆಗಳನ್ನು ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ನಾಲ್ವರು ಶಂಕಿತ ಆರೋಪಿಗಳನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಾಲ್ವರು ಶಂಕಿತರನ್ನು ಪೊಲೀಸರ ವಿಶೇಷ ತಂಡ ವಶಕ್ಕೆ ಪಡೆದಿದೆ. ತಮಿಳುನಾಡಿಗೆ ತೆರಳಿದ್ದ ಪೊಲೀಸ್ ವಿಶೇಷ ಟೀಂ ನಾಲ್ವರನ್ನ ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ರಾಜ್ಯದಾದ್ಯಂತ ಒತ್ತಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ವಿಶೇಷ ಟೀಂಗಳಾಗಿ ಕೇರಳ ಮತ್ತು ತಮಿಳುನಾಡಿಗೆ ತೆರಳಿದ್ದರು ಎನ್ನಲಾಗಿತ್ತು. ಇದೀಗ ತಮಿಳುನಾಡಿಗೆ ತೆರಳಿದ್ದ ಪೊಲೀಸರ ವಿಶೇಷ ಟೀಂ ನಾಲ್ವರನ್ನು ವಶಕ್ಕೆ ಪಡೆದಿದೆ […]

ನಿವೃತ್ತ ಅಧ್ಯಾಪಕ, ಹಿರಿಯ ಮುಖಂಡ ಪಟ್ಲ ಅಣ್ಣಯ್ಯ ನಾಯಕ್ ಇನ್ನಿಲ್ಲ

ಮಣಿಪಾಲ: ನಿವೃತ್ತ ಅಧ್ಯಾಪಕ, ಹಿರಿಯ ರಾಜಕೀಯ ಮುಖಂಡ ಪಟ್ಲ ಅಣ್ಣಯ್ಯ ನಾಯಕ್ (76) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ವಿಧಿವಶರಾದರು. ಅವರು ಮಣಿಪಾಲದ ಶಾಲಾ ಅಧ್ಯಾಪಕರು ಹಾಗೂ ಪಟ್ಲ ಶಾಲೆಯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ರಾಜಕೀಯ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ತನ್ನ ರಾಜಕೀಯ ಜೀವನದಲ್ಲಿ ಜೆಡಿಎಸ್ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ ಮಾತ್ರವಲ್ಲದೆ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೂ ತನ್ನ ಪ್ರಭಾವ ಹೊಂದಿದ್ದರು. ಪರ್ಕಳದ ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. […]