ತೆರೆಮರೆಯ ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ: ಸುನಿಲ್ ಕುಮಾರ್
ಉಡುಪಿ: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದ್ದು,ತೆರೆಮರೆಯ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಅರ್ಜಿ ಆಹ್ವಾನ ಹಳೆ ಸಂಪ್ರದಾಯ ಕೈಬಿಟ್ಟು, ಸಮಿತಿ ಮತ್ತು ಸಾರ್ವಜನಿಕರ ಆಶಯದ ಮೇರೆಗೆ ಗ್ರಾಮೀಣ, ನಗರ ಭಾಗದಲ್ಲಿ ತೆರೆಮರೆಯಲ್ಲಿ ಅನೇಕ ಸಾಧಕರಿದ್ದು, ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನಲ್ಲೆ ಇರುವ 4 […]
ಸೆ.4-5ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ
ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಹಿರಿಯರ ಮತ್ತು ಕಿರಿಯರ 23ರ ವಯೋಮಿತಿಯ ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ಶಿಪ್ ಸೆ.4 ಮತ್ತು 5ರಂದು ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಕ್ರೀಡಾ ಕೂಟದ ಸಂಘಟನ ಸಮಿತಿ ಅಧ್ಯಕ್ಷ, ಶಾಸಕ ಕೆ.ರಘುಪತಿ ಭಟ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕ್ರೀಡಾ ಇಲಾಖೆ, ಮಾಹೆ, ನಿಟ್ಟೆ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಈ ಕ್ರೀಡಾಕೂಟ ನಡೆಯಲಿದ್ದು, ಸುಮಾರು 400 ಮಂದಿ ಕ್ರೀಡಾಪಟುಗಳು, 75 […]
ಉಡುಪಿ: ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ ಸಂಪನ್ನ
ಉಡುಪಿ: ಕೋವಿಡ್ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಮಂಗಳವಾರ ಸರಳ ಹಾಗೂ ಸಾಂಪ್ರದಾಯಿಕವಾಗಿ ವಿಟ್ಲಪಿಂಡಿ ಉತ್ಸವ ನೆರವೇರಿತು. ರಥಬೀದಿಯಲ್ಲಿ ನಡೆದ ಕೃಷ್ಣನ ಲೀಲೋತ್ಸವಗಳನ್ನು ನೆರೆದಿದ್ದ ಭಕ್ತರು ಕಣ್ತುಂಬಿಕೊಂಡರು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಸುವರ್ಣ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕನಕ ನವರತ್ನ ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೇಶ್ವರನ ಮೂರ್ತಿಗಳನ್ನು ಇಡಲಾಗಿತ್ತು. ಎರಡೂ ರಥಗಳು ರಥಬೀದಿಯ ಸುತ್ತ ಮೆರವಣಿಗೆಯಲ್ಲಿ ಸಾಗಿದವು. ರಥಬೀದಿಯಲ್ಲಿ 14 ಗುರ್ಜಿಗಳಲ್ಲಿ ಕಟ್ಟಲಾಗಿದ್ದ ಮೊಸರಿನ […]
ಕೃಷಿ ಭೂಮಿ ಹಡಿಲು ಬೀಳದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ನಿರ್ದೇಶಕ ರಿಷಬ್ ಶೆಟ್ಟಿ
ಉಡುಪಿ: ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಕೃಷಿಯಲ್ಲಿ ತೊಡಗಿಕೊಂಡು ಬೇಸಾಯ ಮಾಡಬೇಕು ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಡೆಯುತ್ತಿರುವ ಹಡಿಲು ಭೂಮಿ ಕೃಷಿ ಆಂದೋಲದಡಿ ನಾಟಿ ಮಾಡಿರುವ ಗದ್ದೆಯಲ್ಲಿ ಬೆಳೆದ ಕಳೆ ತೆಗೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೃಷಿ ಅಂತರ್ಜಲವನ್ನು ವೃದ್ಧಿಸುತ್ತದೆ. ಹಾಗಾಗಿ ಕೃಷಿ ಭೂಮಿಯನ್ನು ಹಡಿಲು ಬೀಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಶಾಸಕ ಕೆ. ರಘುಪತಿ ಭಟ್ […]
ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತಾವ್ರೊಗೆ ಉದ್ಯಾವರದಲ್ಲಿ ಅದ್ಧೂರಿ ಸನ್ಮಾನ
ಉದ್ಯಾವರ: ಸೋನಿ ವಾಹಿನಿಯಲ್ಲಿ ನಡೆದ ಪ್ರತಿಷ್ಠಿತ ಇಂಡಿಯನ್ ಐಡಲ್ ಸೀಸನ್ 12ರ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಏಕೈಕ ಕನ್ನಡಿಗ, ಮೂಡುಬಿದ್ರೆ ಅಲಂಗಾರಿನ ನಿಹಾಲ್ ತಾವ್ರೋ ರವರಿಗೆ ಉದ್ಯಾವರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಅದ್ದೂರಿ ಸನ್ಮಾನ ನಡೆಸಲಾಯಿತು. ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಸಂಘಟನೆಯ ಸಹಕಾರದೊಂದಿಗೆ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ನಿಹಾಲ್ ತಾವ್ರೊ ರವರಿಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ […]