ಸೇವೆಯೇ ಸಂಘಟನೆ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ

ಉಡುಪಿ: ಅತ್ಯಂತ ಸಂಕಷ್ಟದ ಪರಿಸ್ಥಿತಿಯ ನಡುವೆ ಇಂದು ದೇಶ ಕೊರೊನಾವನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ‘ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ […]
ಕರಾವಳಿಯಾದ್ಯಂತ ಸೆ.5ರ ವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 5ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ: ದ.ಕ. ಎಸ್ಪಿಗೆ ದೂರು ನೀಡಿದ ಪತಿ

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿರುವ ಶಂಕೆಯ ಹಿನ್ನೆಲೆಯಲ್ಲಿ ಪತಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದ ಚಿದಾನಂದ ಕೆ.ಆರ್. ಎಂಬವರು ಪತ್ನಿಯ ವಿರುದ್ಧ ದೂರು ನೀಡಿದ್ದಾರೆ. ಇವರ ಪತ್ನಿ ರಾಜಿ ರಾಘವನ್ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಇದಕ್ಕೆ ಆಕೆಯ ಅಕ್ಕನ ಕುಮ್ಮಕ್ಕಿದೆ ಎಂದು ಪತಿ […]