ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ. ಸುನೀಲ್ ಕುಮಾರ್
ಉಡುಪಿ: ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ […]
ರಾಷ್ಟ್ರೀಯ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಉಡುಪಿ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡ
ಉಡುಪಿ: ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿಯೇಶನ್, ಮೌಲೆ ಶೋಟೋಕಾನ್ ಕರಾಟೆ ದೊ ಅಸೋಸಿಯೇಶನ್ ಇಂಡಿಯಾ, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ನಡೆದ ಮಲ್ನಾಡ್ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೆಂಷಿ ವಾಮನ್ ಪಾಲನ್ ಇವರಿಂದ ತರಬೇತಿ ಪಡೆದ ಕರಾಟೆ ಪಟುಗಳಾದ ಅರ್ಮಾನ್ ಶೆಟ್ಟಿ, ಯಶ್ ಶೆಟ್ಟಿ, ಪವನ್ ಕುಮಾರ್, ಮೊಹಮ್ಮದ್ ರಾಹಿಲ್, […]
ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ
ಕಾಪು: ಕಾಪು ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಸಂಘಟನಾತ್ಮಕ ವ್ಯವಸ್ಥೆ ಇತರ ಯಾವುದೇ ಪಕ್ಷದಲ್ಲಿ ಇಲ್ಲ. ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದವರೆಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಇದೆ. ಅದರಲ್ಲಿ ಮಹಾಶಕ್ತಿಕೇಂದ್ರದ ಜವಾಬ್ದಾರಿ ಅತ್ಯಂತ ಮಹತ್ತರವಾದುದು. ಮಹಾಶಕ್ತಿಕೇಂದ್ರಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಿದರೆ ಸಂಘಟನೆ ಬಲಿಷ್ಠಗೊಳ್ಳುವುದು. ಪ್ರಾಮಾಣಿಕವಾಗಿ ಜವಾಬ್ದಾರಿಗೆ ನ್ಯಾಯ ಕೊಟ್ಟು ಪಕ್ಷ ಬೆಳೆಸೋಣ ಅದರೊಂದಿಗೆ ನಾವೂ ಬೆಳೆಯೋಣ ಎಂದರು. ಜಿಲ್ಲಾ […]