ಕಾರ್ಲ ಕಜೆ, ಬಿಳಿಬೆಂಡೆಗೆ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸಲು ಪ್ರಯತ್ನ: ಸಚಿವ ಸುನಿಲ್ ಕುಮಾರ್
ಕಾರ್ಕಳ: ಕಾರ್ಲ ಕಜೆ ಮತ್ತು ಕಾರ್ಲ ಬಿಳಿಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯ ಮಟ್ಟಕ್ಕೆ ವಿಸ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸೋಮವಾರ ಕಾರ್ಕಳ ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಬಿಳಿಬೆಂಡೆ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೆ ಊಟದ ವೇಳೆ ಕಾರ್ಕಳ ಬಿಳಿ ಬೆಂಡೆಯ ಖಾದ್ಯವನ್ನು ನೀಡುವ ಮೂಲಕ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸುವ ಪ್ರಯತ್ನ […]
ತೆಂಕನಿಡಿಯೂರು: ಗೋಮಾಳ ಜಾಗದ ಮದಗದಲ್ಲಿ ನಡೆಯುತ್ತಿರುವ ಅಕ್ರಮ ಕಾಮಗಾರಿ ಸ್ಥಗಿತಗೊಳಿಸಲು ಡಿಸಿಗೆ ಮನವಿ
ಉಡುಪಿ: ತೆಂಕನಿಡಿಯೂರು ಗ್ರಾಮದ ಕೆಳಾರ್ಕಳಬೆಟ್ಟು ಗೋಮಾಳ ಜಾಗದ ಮದಗ (ಕೆರೆ)ದಲ್ಲಿ ಅಕ್ರಮವಾಗಿ ನಡೆಸುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಗ್ರಾಮಸ್ಥರ ಪರವಾಗಿ ಜಿಲ್ಲಾಧಿಕಾರಿ ಎಂ ಕೂರ್ಮ ರಾವ್ ಅವರಿಗೆ ಮನವಿ ಸಲ್ಲಿಸಲಾಯಿತು. ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟು ಸರ್ವೆ ನಂಬ್ರ 61 ರಲ್ಲಿ ಗೋಮಾಳ ಜಾಗವಾಗಿದ್ದು ಅದರಲ್ಲಿ ಈಗಾಗಲೆ ಹಿಂದೂ ರುದ್ರಭೂಮಿ ಮತ್ತು ಘನ ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು ಕೂಡ ನಿರ್ಮಿಸಿರುತ್ತಾರೆ. ಅ ಘಟಕದ ದ್ರವ ತ್ಯಾಜ್ಯಗಳಿಂದ ಸಮಸ್ಯೆ ಅನುಭವಿಸುತ್ತಿದ್ದರು ಗ್ರಾಮದ ಅಭಿವೃದ್ಧಿಯ ಹಿತದೃಷ್ಟಿಯಿಂದ ಸಹಿಸಿಕೊಂಡಿರುತ್ತೇವೆ. ಆದರೆ ಅದರ ಪಕ್ಕದ […]
ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ ಕುರಿತಂತೆ ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ
ಮಂಗಳೂರು: ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಜೈ ತುಳುನಾಡು ಸಂಘಟನೆ ಸೇರಿದಂತೆ ಹಲವಾರು ಇತರ ತುಳು ಪರ ಸಂಘಟನೆಗಳು ಮತ್ತು ತುಳು ಬೆಂಬಲಿಗರು 24 ಗಂಟೆಗಳ ಟ್ವಿಟರ್ ಅಭಿಯಾನವನ್ನು ನಡೆಸಿದರು. ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಸಂವಿಧಾನದ ಸಂವಿಧಾನದ ಎಂಟನೇ ಶೆಡ್ಯೂಲ್ ನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು.
ಈ ವರ್ಷ ಐದು ಸಾವಿರ ಶಿಕ್ಷಕರ ನೇಮಕ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಈ ಘೋಷಣೆ ಮಾಡಿದರು.
ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್
ನವದೆಹಲಿ: ಅಗತ್ಯ ಇರುವ ನ್ಯಾಯಾಂಗ ಅಧಿಕಾರಿಗಳು ಮತ್ತು ತಾಂತ್ರಿಕ ಸದಸ್ಯರ ನೇಮಕಾತಿಯನ್ನು ಮಾಡದಿರುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಚಾಟಿಬೀಸಿದೆ. ಸರ್ಕಾರವು ಅಗತ್ಯ ನೇಮಕಾತಿ ಮಾಡದೆ ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಸರ್ಕಾರದ ಜತೆ ಸಂಘರ್ಷ ನಡೆಸಲು ನ್ಯಾಯಾಲಯ ಬಯಸುವುದಿಲ್ಲ. ಆದರೆ, ಅಪಾರ ಸಂಖ್ಯೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ […]