ಬಿಜೆಪಿಗೆ ಅಧಿಕಾರ ದುರುಪಯೋಗದ ಗೆಲುವು: ಪರಮೇಶ್ವರ್

ಉಡುಪಿ: ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ ಎಂದು ಕಾಂಗ್ರೆಸ್‌ ನಾಯಕ ಜಿ.ಪರಮೇಶ್ವರ್ ಹೇಳಿದರು. ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಾತಿ ಜನಗಣತಿಗೆ ಸರ್ಕಾರದ ₹ 150 ಕೋಟಿ ಖರ್ಚಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ವರದಿ ಪೂರ್ಣಗೊಳ್ಳದ ಕಾರಣ ಸಲ್ಲಿಕೆಯಾಗಿರಲಿಲ್ಲ. ಈಗ […]

ಅರ್ಹ ವಿದ್ಯಾರ್ಥಿಗಳಿಗಿದೆ ವಿದ್ಯಾರ್ಥಿವೇತನ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಉಡುಪಿ: ಭಾರತ ಸರಕಾರದ ಕಾರ್ಮಿಕ ಕಲ್ಯಾಣ ಇಲಾಖಾ ವತಿಯಿಂದ ಬೀಡಿ, ಗಣಿ ಹಾಗೂ ಸಿನಿಮಾ ಕಾರ್ಮಿಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕ್ರಮವಾಗಿ ನವೆಂಬರ್ 15 ಮತ್ತು 30 ಕೊನೆಯ ದಿನ, ಶಾಲಾ ಮುಖ್ಯಸ್ಥರು ಅರ್ಜಿಯನ್ನು ಪರಿಶೀಲಿಸಿ ಶಿಫಾರಸ್ಸು ಮಾಡಲು ಡಿಸೆಂಬರ್ 15 ಮತ್ತು ನೋಡೆಲ್ ಅಧಿಕಾರಿಗಳಿಂದ ಪರಿಶೀಲನೆ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿರುತ್ತದೆ. ಎನ್‌ಎಸ್‌ಪಿ https://scholarship.gov.in […]

ಉಡುಪಿ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದೇನು?

ಉಡುಪಿ: ಈ ಬಾರಿಯ ಕೋವಿಡ್ ಹಿನ್ನಲೆಯಲ್ಲಿ,  ಸರ್ಕಾರ  ಹೊರಡಿಸಿರುವ ಮಾರ್ಗಸೂಚಿಯನ್ವಯ,  ಜಿಲ್ಲೆಯಲ್ಲಿ  ಸರಳವಾಗಿ,  ಸಾರ್ವಜನಿಕರು ಕನಿಷ್ಠ ಸಂಖ್ಯೆಯೊAದಿಗೆ ಭಕ್ತಿ ಪೂರ್ವಕವಾಗಿ ಗಣೇಶೋತ್ಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ವರ್ಚುವಲ್ ಸಭೆಯ ಮೂಲಕ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆಯ  ಮಾರ್ಗಸೂಚಿ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ 3ನೇ ಅಲೆಯ ನಿಯಂತ್ರಣ ಉದ್ದೇಶದಿಂದ ಸರ್ಕಾರ ನೀಡಿರುವ ಮಾರ್ಗಸೂಚಿಯನ್ವಯ ಗಣೇಶ ಚತುರ್ಥಿ ಆಚರಣೆ ನಡೆಸಬೇಕು.   ಮಾರ್ಗಸೂಚಿಗಳ ಪಾಲನೆಯಲ್ಲಿ ಯಾವುದೇ ಗೊಂದಲ […]

ಎನ್ಒಸಿ ಇಲ್ಲದೆ ಗ್ರಾಮೀಣ ಭಾಗದ 3 ಲಕ್ಷ ಮನೆಗಳಿಗೆ ವಿದ್ಯುತ್: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಬಡವರ ಮನೆಗಳಿಗೆ ‘ಬೆಳಕು’ ಯೋಜನೆಯಡಿ ನಿರಕ್ಷೇಪಣ (ಎನ್‌ಒಸಿ) ಪತ್ರ ಇಲ್ಲದೆ, ಪಡಿತರ ಚೀಟಿಯ ಆಧಾರದ ಮೇಲೆ ವಿದ್ಯುತ್‌ ಸಂಪರ್ಕವನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಮೂರು ಲಕ್ಷ ಮನೆಗಳು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿದ್ದು, ಅವುಗಳಿಗೆ ಮುಂದಿನ 100 ದಿನಗಳೊಳಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಬಿಪಿಎಲ್‌ ಅಥವಾ ಎಪಿಎಲ್‌ ಪಡಿತರ ಚೀಟಿ ಇದ್ದರೂ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ ಎಂದರು. ಟ್ರಾನ್ಸ್‌ಫಾರ್ಮರ್‌ ಬ್ಯಾಂಕ್‌ ಸ್ಥಾಪನೆ: […]

ಕೇರಳದಲ್ಲಿ ನಿಫಾ ವೈರಸ್ ಪತ್ತೆ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಇದೀಗ ನಿಫಾ ವೈರಸ್ ಕೂಡ ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡುವ ಪ್ರಕ್ರಿಯೆ ಹಾಗೂ ಕೊರೊನಾ ಪರೀಕ್ಷೆಯನ್ನು ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು. […]