ಕಾರ್ಕಳ: ತಾಲೂಕಿನಾದ್ಯಂತ ನಡೆಯುತ್ತಿರುವ ಗೋಕಳ್ಳತನದ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹ
ಕಾರ್ಕಳ: ಕಾರ್ಕಳ ತಾಲ್ಲೂಕಿನ ಕೆಲವು ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಅಜೆಕಾರು, ಶಿರ್ಲಾಲು, ಅಂಡಾರು, ಕೆರ್ವಾಶೆ ಭಾಗದಲ್ಲಿ ಹಟ್ಟಿಯಿಂದಲೇ ದನಗಳ ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಿರ್ಲಾಲು ಒಂದೇ ಗ್ರಾಮದಲ್ಲಿ ಸುಮಾರು 25 ದನ ಕಳ್ಳತನವಾಗಿದೆ. ತಾಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ಗೋ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋ ಕಳ್ಳರನ್ನು ಶೀಘ್ರವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ದನಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕು. […]
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಮೊಂತಿ ಫೆಸ್ತ್
ಉಡುಪಿ: ಕೊರೊನಾ ಭೀತಿಯ ನಡುವೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ (ತೆನೆ ಹಬ್ಬ) ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಬುಧವಾರ ಆಚರಿಸಿದರು. ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ […]
ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.16 ಡಿವಿಡೆಂಡ್ ಘೋಷಣೆ
ಕೊಡವೂರು: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಕೆ.ನಾರಾಯಣ ಬಲ್ಲಾಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಜತ್ತನ್ ಅವರು, ಸಂಘದ 2020-21 ನೇ ಸಾಲಿನ ವರದಿಯನ್ನು ಮಂಡಿಸಿದರು. ಸಂಘದ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಮಾತನಾಡಿ, ಪ್ರಸ್ತಕ ಆರ್ಥಿಕ ವರ್ಷದಲ್ಲಿ ಸಂಘವು ಎ ಗ್ರೇಡ್ ಅಡಿಟ್ ವರ್ಗೀಕರಣವನ್ನು ಪಡೆದಿದ್ದು, 2020-21ನೇ ಸಾಲಿನಲ್ಲಿ ಒಟ್ಟು 31.77 ಕೋಟಿ ರೂ. ಸಾಲವನ್ನು ವಿತರಿಸಿ, 2020-21 […]
ಉಡುಪಿ: ಜೆಡಿಎಸ್ ಜಿಲ್ಲಾಮಟ್ಟದ ಪಕ್ಷ ಸಂಘಟನೆ ಸಭೆ, ಸದಸ್ಯತ್ವ ಅಭಿಯಾನ
ಉಡುಪಿ: ಜೆಡಿಎಸ್ ಪಕ್ಷದ ಜಿಲ್ಲಾಮಟ್ಟದ ಪಕ್ಷ ಸಂಘಟನೆ ಸಭೆ ಮತ್ತು ಸದಸ್ಯತ್ವ ಅಭಿಯಾನ ಹಾಗೂ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಸಭೆ ಉಡುಪಿ ಸ್ವದೇಶಿ ಹೇರಿಟೇಜ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿ ಅವರು, ಜಿಲ್ಲೆಯಲ್ಲಿ ಪಕ್ಷವನ್ನು ಕಾಂಗ್ರೆಸ್-ಬಿಜೆಪಿಗೆ ಸರಿಸಮಾನವಾಗಿ ಬೆಳೆಸಲು ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು. ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸುಧಾಕರ್ ಶೆಟ್ಟಿ ಮೈಸೂರು […]
ಕೋಲ್ ಇಂಡಿಯಾ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೋಲ್ ಇಂಡಿಯಾ ಲಿಮಿಟೆಡ್‌ನ (ಸಿಐಎಲ್) ವೆಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ಖಾಲಿ ಇರುವ ಗ್ರಾಜುಯೇಟ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು ಡಿಪ್ಲೊಮಾ, ಡಿಗ್ರಿ ಟೆಕ್ನಿಷಿಯನ್ ಕೋರ್ಸ್‌ಗಳನ್ನು ಪಾಸ್ ಮಾಡಿರಬೇಕು. ಹುದ್ದೆಗಳ ಸಂಖ್ಯೆ: 316 1) ಟೆಕ್ನೀಷಿಯನ್ ಅಪ್ರೆಂಟಿಸ್ (ಡಿಪ್ಲೊಮಾ) 215 2)ಗ್ರಾಜುಯೇಟ್ ಅಪ್ರೆಂಟಿಸ್ (ಡಿಗ್ರಿ) 101 ವಿದ್ಯಾರ್ಹತೆ: ಡಿಪ್ಲೊಮಾ ಹಾಗೂ ಬಿ.ಇ/ಬಿ.ಟೆಕ್, ಬಿಎಸ್.ಸಿ, ಎಂಸಿಎ, ಸಿಎ. (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ). ವಯೋಮಿತಿ: 1 ಸೆಪ್ಟೆಂಬರ್ 2021ಕ್ಕೆ ಅನ್ವಯವಾಗುವಂತೆ […]