ಉಡುಪಿ: ವೀಕೆಂಡ್ ಕರ್ಫ್ಯೂ ಬಗ್ಗೆ ನಾಳೆ ಅಂತಿಮ ನಿರ್ಧಾರ

ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವ ಬಗ್ಗೆ ನಾಳೆ (ಸೆ.10) ಬೆಳಿಗ್ಗೆ ಅಂತಿಮ ನಿರ್ಧಾರವನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ.ಅವರು ಕೈಗೊಳ್ಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಇಂದು ಜಿಲ್ಲಾ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಹಾಗೂ ಸಂಬಂಧಿತ ಇತರರ ಜೊತೆ ವ್ಯಾಪಕ ಚರ್ಚೆ ನಡೆದಿದೆ.‌ ಈ ನಿಟ್ಟಿನಲ್ಲಿ ತುಂಬಾ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ನಾಳೆ ಸಚಿವರು, ಶಾಸಕರೊಂದಿಗೆ ಇನ್ನಷ್ಟು ಚರ್ಚಿಸಿ ಮತ್ತೊಂದು […]

ಉಡುಪಿ: ಕೇರಳಕ್ಕೆ ಪ್ರಯಾಣ ಮಾಡುವ ಕುರಿತಂತೆ ಜಿಲ್ಲಾಡಳಿತದಿಂದ ಸೂಚನೆ

ಉಡುಪಿ: ಕರ್ನಾಟಕಕ್ಕೆ ಆಗಮಿಸುವ ಕೇರಳದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಪ್ರಸ್ತುತ ಕೋವಿಡ್ 19 ನೆಗೆಟಿವ್ RT-PCR ವರದಿಯನ್ನು ಹೊಂದಿದ್ದರೂ ಕರ್ನಾಟಕಕ್ಕೆ ಬಂದ ಮೇಲೆ ಪರಿಶೀಲಿಸಿದಾಗ ಕೋವಿಡ್ 19 RT-PCR ವರದಿಯು ಪಾಸಿಟಿವ್ ಬರುತ್ತಿದೆ. ಇಂತಹ ಪ್ರಕರಣಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೋವಿಡ್ -19 ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೇರಳದಿಂದ ಆಗಮನಕ್ಕಾಗಿ ಸರಕಾರದಿಂದ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ. ಅದರಂತೆ ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ. ಸೂಚನೆಗಳು: ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆಡಳಿತಾಧಿಕಾರಿಗಳು/ ನರ್ಸಿಂಗ್ […]

ಕೋವಿಡ್ ಪಾಸಿಟಿವಿಟಿ ದರ ಇಳಿಮುಖ: ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಇಳಿಮುಖವಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸರಾಸರಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 0.73 ರಷ್ಟಿದ್ದು, ವೀಕೆಂಡ್ ಕರ್ಫ್ಯೂ ಹೇರಿಕೆ‌ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ. ಈ‌ ಹಿನ್ನೆಲೆ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಲಾಗಿದೆ. ಒಂದು ವೇಳೆ ಸೋಂಕು ಹೆಚ್ಚಳ‌ ಆದ್ರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಗತ್ಯ […]

ಉಡುಪಿ: ಸಚಿವ ಸುನಿಲ್ ಕುಮಾರ್ ಅವರಿಂದ ಅಮೃತ ಯೋಜನೆ, ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ

ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅಮೃತ ಯೋಜನೆ ಹಾಗೂ ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೋವಿಡ್ ಸೋಂಕಿತರು, ಲಸಿಕೆ ವಿತರಣೆ, ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು. ಆಕ್ಸಿಜನ್ ಪ್ಲಾಂಟ್ ಹಾಗೂ ಐಸಿಯು ನಿರ್ಮಾಣ ವಿಳಂಬವಾಗಿರುವುದಕ್ಕೆ ಅಸಮಾಧಾನ ಸೂಚಿಸಿದ ಸಚಿವರು ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಸೂಚಿಸಿದರು. ಸಂಪೂರ್ಣ ಲಸಿಕೀಕರಣ […]