ಉಡುಪಿ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತ ಬಾಲಕನ ನೇಮಕ ಪ್ರಶ್ನಿಸಿ ಪಿಐಎಲ್: ವಿಚಾರಣೆ ನಡೆಸಿದ ಹೈಕೋರ್ಟ್
ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಪೀಠಾಧಿಪತಿಯನ್ನಾಗಿ ಅಪ್ರಾಪ್ತ ಬಾಲಕನನ್ನು ನೇಮಕ ಮಾಡಲಾಗಿದೆ ಎಂದು ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗಿರುವ ಪಿಐಎಲ್ ವಿಚಾರಣೆ ಇಂದು ನಡೆಯಿತು. ಪೀಠಾಧಿಪತಿಯಾಗಿ 16 ವರ್ಷದ ಬಾಲಕನ ನೇಮಕವಾಗಿದೆ. ಈ ನೇಮಕ ಕಾನೂನುಬಾಹಿರವೆಂದು ಅರ್ಜಿದಾರರು ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನ ಮುಂದಿನ ವಾರಕ್ಕೆ ಮುಂದೂಡಿದೆ. ಅನಿರುದ್ಧ ಸರಳತ್ತಾಯರನ್ನು ಸೋದೆ ವಾದಿರಾಜ ಮಠದಿಂದ ಪೀಠಾಧಿಪತಿ ನೇಮಕ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಪ್ರಾಪ್ತರ ನೇಮಕ ಮಾಡುವಂತಿಲ್ಲವೆಂದು ಪಿಐಎಲ್ ಮೂಲಕ ನೇಮಕವನ್ನು ಪ್ರಶ್ನಿಸಲಾಗಿತ್ತು.
ಪೇಜಾವರ, ಆದಿಚುಂಚನಗಿರಿ ಮಠದ ಶ್ರೀಗಳ ಸಮಾಗಮ
ಬೆಂಗಳೂರು: ಶ್ರೀ ಆದಿಚುಂಚನಗಿರಿ ಸಂಸ್ಥಾನದ ಶ್ರೀ ನಿಮರ್ಲಾನಂದನಾಥ ಸ್ವಾಮೀಜಿಯವರು ಸೋಮವಾರ ಬೆಂಗಳೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು . ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸರು ಮತ್ತು ವಿದ್ಯಾರ್ಥಿಗಳು ಸ್ವಾಮೀಜಿಯವರನ್ನು ಪೂರ್ಣಕುಂಭದೊಂದಿಗೆ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಪೇಜಾವರ ಶ್ರೀಗಳಿಗೆ ಶ್ರೀಸಂಸ್ಥಾನದ ಗೌರವಾರ್ಪಾಣೆ ಸಲ್ಲಿಸಿದ ಬಳಿಕ ಪೇಜಾವರ ಶ್ರೀಗಳೂ ಶ್ರೀ ನಿರ್ಮಲಾನಂದನಾಥ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರನ್ನು ಸತ್ಕರಿಸಿದರು. ಬಳಿಕ ವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ನಿತ್ಯದ ಸಭಾ ಕಾರ್ಯಕ್ರಮದಲ್ಲೂ ಉಭಯ ಸ್ವಾಮೀಜಿಯವರು ಪಾಲ್ಗೊಂಡರು.
ನಿಟ್ಟೆ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮ
ನಿಟ್ಟೆ:ಪ್ರತಿಯೊಂದು ಸಂಸ್ಥೆಯ ಏಳಿಗೆಯಲ್ಲಿ ಅಲ್ಲಿನ ಪ್ರತಿಯೊಬ್ಬ ಸಿಬ್ಬಂದಿಯ ಪಾತ್ರವೂ ಅತಿಮುಖ್ಯ ಎಂದು ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಎಂ. ವೆಂಕಟೇಶ್ ಅವರು ಅಭಿಪ್ರಾಯಪಟ್ಟರು. ಅವರು ಸೆ.13 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಹಮ್ಮಿಕೊಂಡಿದ್ದ ಶಿಕ್ಷಕ ಹಾಗೂ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ನಾನು, ನನ್ನದು ಎಂಬ ತನವನ್ನು ಬಿಟ್ಟು ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಶ್ರಮವಹಿಸಿ ಕೆಲಸ ಮಾಡಬೇಕು. ನಮ್ಮ ಸಮಾಜದ ಸರ್ವತೋಮುಖ ಅಭಿವೃದ್ಧಿಯನ್ನು ಕಾಣುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸಮಾಡಬೇಕು” ಎಂದು ಅವರು […]
ಆಸ್ಕರ್ ಫೆರ್ನಾಂಡೀಸ್ ನಿಧನಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ
ಕುಂದಾಪುರ : ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್ ಅವರ ನಿಧನಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಕರಾವಳಿಯ ಸಾಮಾನ್ಯ ಕುಟುಂಬದಲ್ಲಿ ಜನಿಸಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾಗಿ ಮೇರು ವ್ಯಕ್ತಿತ್ವ ಹೊಂದಿದ್ದ ಆಸ್ಕರ್ ಫೆರ್ನಾಂಡೀಸ್ ಅವರು ತಮ್ಮ ಸರಳ ಸಜ್ಜನಿಕೆಯ ಮೂಲಕ ದೇಶಾದ್ಯಂತ ಅಪಾರ ಮಂದಿ ಪಕ್ಷಾತೀತ ಅಭಿಮಾನಿಗಳನ್ನು ಹೊಂದಿದ್ದರು. ದಾಖಲೆಯ ಅವಧಿಯಲ್ಲಿ ಸಂಸದರಾಗಿ ರಾಷ್ಟ್ರ ಸೇವೆ ಸಲ್ಲಿಸಿದ್ದ ಅವರು, ಸಮಾಜದ ಸಾಮಾನ್ಯ […]
ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸೋನಿಯಾ ಗಾಂಧಿ ಸಂತಾಪ: ಬ್ಲಾಸಂಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ಅಧಿನಾಯಕಿ
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಆಸ್ಕರ್ ಅವರ ಪತ್ನಿ ಬ್ಲಾಸಂ ಅವರಿಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಬ್ಲಾಸಂ ಅವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಮಾತು ನುಡಿದಿದ್ದಾರೆ. ಈ ವೇಳೆ ಪತಿ ಅಗಲುವಿಕೆಯ ನೋವಿನಿಂದ ಬ್ಲಾಸಂ ಅವರು ಕಣ್ಣೀರಿಟ್ಟಿದ್ದಾರೆ. ಇಂದಿರಾ ಗಾಂಧಿ ಕಾಲದಿಂದಲೂ ಆಸ್ಕರ್ ಅವರು ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದರು. […]