ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ನೋಕಿಯಾ.!

ಬೆಂಗಳೂರು: ನೋಕಿಯಾ ಮೊಬೈಲ್ ಕಂಪೆನಿ ದೇಶದ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಸಿ ಸರಣಿಯಲ್ಲಿ ಹೊಸದಾಗಿ C01 ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಹೊಸ ನೋಕಿಯಾ C01 ಪ್ಲಸ್ ಸ್ಮಾರ್ಟ್‌ಫೋನ್, ಆರಂಭಿಕ ಮಾದರಿಯ ಆವೃತ್ತಿಯಾಗಿದ್ದು, ದೇಶದಲ್ಲಿ ₹5,999 ದರ ಹೊಂದಿದೆ. ನೀಲಿ ಮತ್ತು ನೇರಳೆ ಬಣ್ಣದಲ್ಲಿ ಹೊಸ ಫೋನ್ ಲಭ್ಯವಾಗಲಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್ ಮೂಲಕ ನೋಕಿಯಾ ಸ್ಮಾರ್ಟ್‌ಫೋನ್ ದೊರೆಯಲಿದೆ. ತಾಂತ್ರಿಕ ವೈಶಿಷ್ಟ್ಯ: 5.45 ಇಂಚಿನ ಎಚ್‌ಡಿ+ ಡಿಸ್‌ಪ್ಲೇ, ಒಕ್ಟಾ ಕೋರ್ ಉನಿಸಾಕ್ SC9863A ಪ್ರೊಸೆಸರ್ […]
ಉಡುಪಿ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಫೀವರ್ ಸರ್ವೆ; ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ನಿಯಂತ್ರಿಸಲು ಶೀಘ್ರದಲ್ಲಿ ಕೋವಿಡ್ ಪೀಡಿತರನ್ನು ಪತ್ತೆ ಹಚ್ಚಿ, ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಫೀವರ್ ಸರ್ವೇ ಕಾರ್ಯಕ್ರಮ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟೆಂಬರ್ 20 ರಿಂದ 22 ರ ವರೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಎಲ್ಲಾ ಗ್ರಾಮೀಣ ಮತ್ತು […]
ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಅಂಡಾರು ದೇವಿಪ್ರಸಾದ್ ಶೆಟ್ಟಿ ಸಂತಾಪ

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ವಿಭಾಗ ಪ್ರಭಾರಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ. ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು, ಅವರ ಸೇವೆ ಅನನ್ಯವಾದುದು ಎಂದು ಅವರು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ […]
ಆಸ್ಕರ್ ಫೆರ್ನಾಂಡಿಸ್ ನಿಧನ: ಪೇಜಾವರ ಶ್ರೀ, ಶೋಭಾ ಕರಂದ್ಲಾಜೆ, ಸುನಿಲ್ ಕುಮಾರ್ ಸಂತಾಪ

ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ. ಆಸ್ಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದ್ದು, ಅವರ ನಿಧನದಿಂದ ನಾಡು ಓರ್ವ ಮುಸ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ. ಅವರು ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸಲ್ಲಿಸಿರುವ ಸೇವೆ ಅಪಾರವಾದುದು. ಅವರು ಪೇಜಾವರ ಮಠ ಸಹಿತ ಉಡುಪಿಯ ಎಲ್ಲ ಅಷ್ಟಮಠಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಮಠದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಆಸ್ಕರ್ ಅವರ ಆತ್ಮಕ್ಕೆ ಭಗವಂತನು […]
ಕಾಪು: ಬಿಜೆಪಿ ರಾಜ್ಯಾಧ್ಯಕ್ಷರಿಂದ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಕಾಪು: ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, […]