ಉಡುಪಿ: ಕಾಂಗ್ರೆಸ್ ಮುಖಂಡ ಆಸ್ಕರ್ಗೆ ಬಿಜೆಪಿಯಿಂದ ಶ್ರದ್ಧಾಂಜಲಿ
ಉಡುಪಿ: ಅಗಲಿದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನುಡಿನಮನ ಸಲ್ಲಿಸಲಾಯಿತು. ಆಸ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಕೆ. ರಘುಪತಿ ಭಟ್ ನುಡಿ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ವಿರೋಧ ಪಕ್ಷದ ನಾಯಕರು ಅಗಲಿದಾಗ ವಿರೋಧಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಸಂಪ್ರದಾಯ ಉಡುಪಿ ಜಿಲ್ಲೆಯಲ್ಲಿ ನಡೆದುಕೊಂಡು ಬಂದಿದೆ. ಇದೇ ರೀತಿ ಡಾ.ವಿ.ಎಸ್.ಆಚಾರ್ಯ ಅಗಲಿದಾಗ […]
ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದವರಿಗೆ, ಸ್ವಯಂ ಉದ್ಯೋಗ, ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ , ಭೂ ಒಡೆತನ ಯೋಜನೆ, ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ವೆಬ್ಸೈಟ್ https://kbdc.karnataka.gov.in ನಲ್ಲಿ ಅಕ್ಟೋಬರ್ 14 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 0820-2574884 ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಉಡುಪಿ: ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು
ಉಡುಪಿ: ಉಡುಪಿ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದುಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು […]
ಇಂಜಿನಿಯರ್ಸ್ ದಿನಾಚರಣೆಗೆ ಶುಭಹಾರೈಸಿದ ನಾಡಿನ ಗಣ್ಯರು
ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಮಾಸಾಶನ: ಅರ್ಜಿ ಆಹ್ವಾನ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2021-22ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟç ಮಟ್ಟವನ್ನು ಪ್ರತಿನಿಧಿಸಿದ ಕರ್ನಾಟಕದ 50 ವರ್ಷ ಮೇಲ್ಪಟ್ಟ, ವಾರ್ಷಿಕ ಆದಾಯ ಗರಿಷ್ಠ 20 ಸಾವಿರ ರೂ ಮೀರಿರದ ಸಂಕಷ್ಟದಲ್ಲಿರುವ ಮಾಜಿ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ತಮ್ಮ ಜನನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಕ್ರೀಡಾ ಪ್ರಮಾಣ ಪತ್ರದೊಂದಿಗೆ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30ರೊಳಗಾಗಿ ಉಡುಪಿ ಜಿಲ್ಲಾ ಕ್ರೀಡಾಂಗಣ ಕಛೇರಿಗೆ ಸಲ್ಲಿಸಬಹುದಾಗಿದ್ದು, ಹಿರಿಯ […]