ಕೋವಿಡ್ ಲಸಿಕೆ : ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ
ಉಡುಪಿ: ಸೆಪ್ಟೆಂಬರ್ 16 ರಂದು ಬೆಳಿಗ್ಗೆ 10 ರಿಂದ 11 ರ ವರೆಗೆ ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನ್ ಕುಮಾರ್ ಅವರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂದಿಸಿದಂತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ. 96639 57222 ನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನ […]
ಕಾರ್ಕಳ: ಸೆ.17ರಂದು ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡ (ಕಿಡ್ನಿ ) ರೋಗದ ಉಚಿತ ತಪಾಸಣಾ ಶಿಬಿರ
ಕಾರ್ಕಳ: ಕಾರ್ಕಳ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 17ರ ಶುಕ್ರವಾರದಂದು ಮೂತ್ರ ಪಿಂಡ (ಕಿಡ್ನಿ ) ರೋಗದ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಕೀರ್ತಿನಾಥ್ ಬಲ್ಲಾಳ ತಿಳಿಸಿದ್ದಾರೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರಪಿಂಡ ವಿಭಾಗದ ಮುಖ್ಯಸ್ಥರಾದ ಡಾ. ಶಂಕರ್ ಪ್ರಸಾದ್ ಮತ್ತು ಸಹಾಯಕರಾದ ಡಾ ಮೋಹನ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ರ ವರೆಗೆ ನಡೆಯಲಿದ್ದು, ವೈದ್ಯರ ಸಲಹೆ ಮೇರೆಗೆ […]
ಕೊಡವೂರು: ₹3 ಕೋಟಿ ವೆಚ್ಚದ ಕೊಡವೂರು- ಲಕ್ಷ್ಮೀನಗರ ಕಾಂಕ್ರೀಟ್ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ
ಮಲ್ಪೆ: ಮಲ್ಪೆಯಿಂದ ಸಂತೆಕಟ್ಟೆ ಮಾರ್ಗವಾಗಿ ದಿನದಲ್ಲಿ ಅನೇಕ ಶಾಲಾ ವಾಹನ ಪ್ರವಾಸಿಗರ ವಾಹನ ಮತ್ತು ಮೀನುಗಾರಿಕೆಗೆ ಸಂಬಂಧಪಟ್ಟಿರುವ ದೊಡ್ಡ ದೊಡ್ಡ ವಾಹನಗಳು ಸಂಚರಿಸುವುದು ಕೊಡವೂರು ಲಕ್ಷ್ಮೀನಗರ ಕಿರಿದಾದ ಮಾರ್ಗವಾಗಿ ರಸ್ತೆಯಿಂದ, ನಾಗರಿಕರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತಿರುವುದನ್ನು ಗುರುತಿಸಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಕಾಂಕ್ರೀಟಿಕರಣ ಮಾಡಬೇಕು. ಆಗ ಮಾತ್ರ ಅಪಘಾತ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಮನಗಂಡ ನಗರಸಭಾ ಸದಸ್ಯ ವಿಜಯ ಕೊಡವೂರು ಅವರು ತನ್ನ ಕಾರ್ಯಕರ್ತರೊಂದಿಗೆ ಶಾಸಕ ರಘುಪತಿ ಭಟ್ ಅವರನ್ನು […]
ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ. ಶಿವಕುಮಾರ್
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಆಸ್ಕರ್ ಫೆರ್ನಾಂಡಿಸ್ ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ವ್ಯಕ್ತಿ. ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು. ಕಾಂಗ್ರೆಸ್ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದರು. ಮಾಜಿ ಸಚಿವರಾದ ಪ್ರಮೋದ್ […]
ಮಂಗಳೂರು: ಗೋವಾದಿಂದ ಬಂದ ವ್ಯಕ್ತಿಗೆ ನಿಫಾ ಶಂಕೆ; ಆಸ್ಪತ್ರೆಗೆ ದಾಖಲು
ಮಂಗಳೂರು: ನಿಫಾ ಸೋಂಕಿನ ಶಂಕಿತ ವ್ಯಕ್ತಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗೋವಾದಲ್ಲಿ ಆರ್ಟಿ-ಪಿಸಿಆರ್ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಎರಡು ದಿನಗಳ ಹಿಂದೆ ಜ್ವರ ಕಾಣಿಕೊಂಡಿತ್ತು. ಮತ್ತೆ ಪುನಃ ಜ್ವರ ಬಂದಿರುವ ಕಾರಣ, ಜ್ವರದ ಲಕ್ಷಣ ಆಧರಿಸಿ, ಈ ವ್ಯಕ್ತಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪುಣೆಯಿಂದ ಪರೀಕ್ಷಾ ವರದಿ ಇನ್ನೆರಡು ದಿನಗಳಲ್ಲಿ ಬರಬಹುದು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮಣಿಪಾಲಕ್ಕೂ ಬಂದಿದ್ದ.! ಈ ವ್ಯಕ್ತಿ ಗೋವಾದಿಂದ ಕಾರವಾರಕ್ಕೆ ಬಂದು, […]