ಕಾರ್ಕಳ: ಸೆ.19ರಂದು ಬೃಹತ್ ರಕ್ತದಾನ ಶಿಬಿರ

ಕಾರ್ಕಳ: ಸೆ.19ರಂದು ಬೃಹತ್ ರಕ್ತದಾನ ಶಿಬಿರ ಕಾರ್ಕಳ: ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಇದೇ ಬರುವ ಸೆಪ್ಟೆಂಬರ್ 19ರ ಭಾನುವಾರದಂದು ಇರುವತ್ತೂರಿನ ಗರಡಿಯ ಬಳಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ ಏಳರವರೆಗೆ ಇಡೀ ದೇಶಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಈಶ್ವರ ನಡೆಯಲಿದೆಯೆಂದು ಯುವಮೋರ್ಚಾ ಕಾರ್ಕಳ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ […]

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್?: ತಗ್ಗಲಿದೆಯೇ ತೈಲ ಬೆಲೆ?

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಗ್ಗಿಸಬೇಕು ಎಂದಾದರೆ ಇವುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬ ಅಭಿಪ್ರಾಯ ದೇಶಾದ್ಯಂತ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‌ಟಿ ಮಂಡಳಿಯು ಶುಕ್ರವಾರದ ಸಭೆಯಲ್ಲಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆಟ್ರೋಲ್, ಡಿಸೇಲ್ ಜಿಎಸ್ ಟಿ ವ್ಯಾಪ್ತಿಗೆ ಬಂದರೆ ಆರ್ಥಿಕ ತಜ್ಞರ ಪ್ರಕಾರ ಪೆಟ್ರೋಲ್‌ ದರ 75 ರೂ.ಗಳಿಗೆ ಇಳಿಕೆಯಾಗಲಿದೆ […]

ಮಂಗಳೂರು: ನಿಫಾ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ವರದಿ ನೆಗೆಟಿವ್

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಇವರು ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಜ್ವರ ಕಾಣಿಕೊಂಡಿತ್ತು. ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ […]

ಸುಂದರ ಕನಸುಗಳನ್ನು ಕಟ್ಟುವ ಪ್ರೀತಿಯ ಇಂಜಿನಿಯರ್‌ಗಳಿಗೆ ಇಂಜಿನಿಯರ್ಸ್ ಡೇ ಶುಭಾಶಯಗಳು

ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಪಾತ್ರವೂ ಹಿರಿದು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತು ಆರ್ಥಿಕವಾಗಿ ಸದೃಢವನ್ನಾಗಿಸಲು ನೆರವಾಗುವ ಎಂಜಿನಿಯರ್‌ಗಳ ಸೇವೆಯನ್ನು ಸ್ಮರಿಸುವ, ತನ್ಮೂಲಕ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ `ಇಂಜಿನಿಯರ್‌ಗಳ ದಿನ’ವನ್ನು ಆಚರಿಸಲಾಗುತ್ತದೆ. ಇಂದು ಸೆಪ್ಟೆಂಬರ್ ೧೫ ಇಂಜಿನಿಯರ್‌ಗಳ ದಿನ ಬನ್ನಿ ಇಂಜಿನಿಯರ್ ದಿನದ ಆಚರಣೆಯ ಹಿನ್ನಲೆ ಏನು ಒಮ್ಮೆ ತಿಳಿದುಕೊಳ್ಳೋಣ. ಸರ್ ಎಂ ವಿಶ್ವೇಶ್ವರಯ್ಯ. ನಮ್ಮ ನೆಲದ ಸಾಕ್ಷಿಪ್ರಜ್ಞೆ. ಭಾರತದ ಕಂಡ ಅಪ್ರತಿಮ ಇಂಜಿನಿಯರ್. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ 1860 ಸೆಪ್ಟೆಂಬರ್‌ 15ರಂದು ಜನಿಸಿದ ಮೋಕ್ಷಗುಂಡಂ […]