ಕುಂದಾಪುರ: ನಾಳೆ ಬಿಜೆಪಿ ಮಹಿಳಾ ಮೋರ್ಚಾದಿಂದ ‘ಅಂಧರಿಗೆ ನೆರವು’ ಕಾರ್ಯಕ್ರಮ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ ಇದೇ ನಾಳೆ (ಸೆ. 17) ಕೋಟ ಮಂಗಲ್ಯಮಂದಿರದಲ್ಲಿ ಅಂಧರಿಗೆ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ವೇಳೆ ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಕೂಡ ನಡೆಯಲಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ […]
ಉಡುಪಿ: ಬಾವಿಗೆ ಹಾರಿ ಸಿಟಿ ಬಸ್ ಚಾಲಕ ಆತ್ಮಹತ್ಯೆ
ಉಡುಪಿ: ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತರನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಸಿಟಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಇದೇ ಖಿನ್ನತೆಯಲ್ಲಿ ಮನನೊಂದು ಆದಿ ಉಡುಪಿಯ ಅಂಬೇಡ್ಕರ್ ಭವನದ ಬಳಿ ಇರುವ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ […]
ಅಂಬಲಪಾಡಿ ಬಿಜೆಪಿ ಬೂತ್ ಸಶಕ್ತೀಕರಣ ಅಭಿಯಾನ
ಉಡುಪಿ: ರಾಜಕೀಯ ಪಕ್ಷದ ತಳ ಮಟ್ಟದ ಸಂಘಟನಾ ವ್ಯವಸ್ಥೆಯೇ ಬೂತ್. ನೈಜ ಮತ್ತು ನಿಷ್ಠಾವಂತ ಕಾರ್ಯಕರ್ತರ ತಂಡ ರೂಪುಗೊಳ್ಳುವ ವೇದಿಕೆಯೇ ಬೂತ್ ಸಮಿತಿ. ಬಿಜೆಪಿ ಇಂದು ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಬೂತ್ ಮಟ್ಟದ ಕಾರ್ಯಕರ್ತರ ಪರಿಶ್ರಮವೇ ಕಾರಣ. ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಉಡುಪಿ ನಗರದ ನೇತೃತ್ವದಲ್ಲಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ […]
ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಸಮಾವೇಶ
ಪಡುಬಿದ್ರಿ: ಪಡುಬಿದ್ರಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶವು ಪಡುಬಿದ್ರಿ ಉದಯಾದ್ರಿಯಲ್ಲಿ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೂ ರಾಷ್ಟ್ರೀಯ ಅಧ್ಯಕ್ಷರಿಗೂ ಸಮಾನ ಗೌರವವಿದ್ದು ಅದನ್ನು ಬೂತ್ ಅಧ್ಯಕ್ಷರು ಅರ್ಥ ಮಾಡಿಕೊಂಡು ಪ್ರತೀ ಬೂತ್ ನಲ್ಲಿ ಅಧ್ಯಕ್ಷರುಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು. ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಪ್ರತೀ ಬೂತ್ ಅಧ್ಯಕ್ಷರ ಮನೆಯಲ್ಲಿ ಕನಿಷ್ಠ 30-40 ಜನ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕು. ತನ್ಮೂಲಕ ಪ್ರತೀ ಬೂತ್ ಅಧ್ಯಕ್ಷರು […]
ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಸುಂದರ ಗೌಡ ಮುದ್ರಾಡಿ ನಿಧನ
ಉಡುಪಿ: ಮಲೆಕುಡಿಯ ಸಂಘದ ಉಡುಪಿ ಜಿಲ್ಲಾಧ್ಯಕ್ಷರಾದ ಸುಂದರ ಗೌಡ ಮುದ್ರಾಡಿ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಒಂಬತ್ತು ತಿಂಗಳುಗಳಿಂದ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಹಾಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.