ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್ ನಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಇನ್ಫ್ಯೂಷನ್ ಪಂಪ್‌ ಉಪಕರಣ ಕೊಡುಗೆ

ಮಣಿಪಾಲ: ಸಹಾಯ ಹಸ್ತಾ ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್, ದಿ ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ 317 ಸಿ ವತಿಯಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ಇನ್ಫ್ಯೂಷನ್ ಪಂಪ್‌ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ಕೀಮೋಥೆರಪಿ ಔಷಧಿಗಳನ್ನು ಎಚ್ಚರಿಕೆಯಿಂದ ಕ್ಯಾನ್ಸರ್ ಮಕ್ಕಳಿಗೆ ನೀಡುವಲ್ಲಿ ಇನ್ಫ್ಯೂಷನ್ ಪಂಪ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಣಿಪಾಲದ  ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ  ಇಂಟರ್ ನ್ಯಾಷನಲ್  ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ […]

ಉಡುಪಿ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ; ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಾಗಿ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಸೆಪ್ಟೆಂಬರ್ 30 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810 […]

ವಿದ್ಯುತ್ ಕ್ಷೇತ್ರದ ಖಾಸಗೀಕರಣ ಇಲ್ಲ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್‌ ನಿಗಮಗಳನ್ನು ಖಾಸಗೀಕರಣ ಮಾಡುವುದಿಲ್ಲ. ಈ ಕುರಿತ ಯಾವುದೇ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ವಿ.ಸುನೀಲ್‌ ಕುಮಾರ್‌ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದರು. ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಹಾಗೂ ಪ್ರಿಪೇಯ್ಡ್‌ ಮೀಟರ್‌ ಅಳವಡಿ ಸುವ ಪ್ರಸ್ತಾವವೂ ಇಲ್ಲ ಎಂದರು.

ಇನ್ಮುಂದೆ ವಾಟ್ಸ್ ಆ್ಯಪ್ ಮೂಲಕ‌ ಸಿಲಿಂಡರ್‌ ಕಾಯ್ದಿರಿಸಲು ಅವಕಾಶ

ಬೆಂಗಳೂರು: ಇನ್ಮುಂದೆ ಗ್ರಾಹಕರು ವಾಟ್ಸ್ ಆ್ಯಪ್ ಮೂಲಕ‌ವೂ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಕಾಯ್ದಿರಿಸಬಹುದಾಗಿದೆ. ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಬಿಪಿಸಿಎಲ್) ವಾಟ್ಸ್ ಆ್ಯಪ್ ಸಂದೇಶಗಳ ಮೂಲಕ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮರುಪೂರಣ ಹಾಗೂ ಕಾಯ್ದಿರಿಸಲು ಅವಕಾಶ ಮಾಡಿಕೊಟ್ಟಿದೆ. ‘ಹಲೋ’ ಸಂದೇಶವನ್ನು 1800224344 ಸಂಖ್ಯೆಗೆ ಕಳಿಸಿ, ಈ ಸೇವೆಯನ್ನು ಪಡೆಯಬಹುದು. ಹೆಚ್ಚುವರಿ ಸಿಲಿಂಡರ್, ಹೊಸ ಸಂಪರ್ಕ, ವಿಳಾಸ ಬದಲಾವಣೆ, ವಿತರಕರ ಕುರಿತ ಮಾಹಿತಿ ಮತ್ತು ಸಿಲಿಂಡರ್ ದರಗಳ ಮಾಹಿತಿಯನ್ನೂ ವಾಟ್ಸ್ ಆ್ಯಪ್ ಸಂದೇಶದ […]

ಗೃಹಸಾಲ ಪಡೆಯುವ ಗ್ರಾಹಕರಿಗೆ ಎಸ್‌ಬಿಐನಿಂದ ಬಂಪರ್ ಕೊಡುಗೆ

ಮುಂಬೈ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಗೃಹಸಾಲ ಪಡೆಯುವ ಗ್ರಾಹಕರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಕ್ರೆಡಿಟ್‌ ಸ್ಕೋರ್‌ ಆಧಾರದ ಮೇಲೆ, ಗೃಹಸಾಲದ ಮೊತ್ತ ಎಷ್ಟೇ ಇದ್ದರೂ ಶೇಕಡ 6.70ರಿಂದ ಬಡ್ಡಿದರ ಆರಂಭವಾಗಲಿದೆ. ಈ ಹಿಂದೆ, ₹ 75 ಲಕ್ಷಕ್ಕಿಂತ ಅಧಿಕ ಮೊತ್ತದ ಗೃಹಸಾಲ ಪಡೆಯುವವರು ಶೇ 7.15ರಷ್ಟು ಬಡ್ಡಿ ನೀಡಬೇಕಿತ್ತು. ಹೊಸ ಕೊಡುಗೆಯ ಅಡಿ, ಗ್ರಾಹಕರು ಶೇ 6.70ರ ಬಡ್ಡಿ ದರದಲ್ಲಿ ಯಾವುದೇ ಮೊತ್ತದ ಗೃಹಸಾಲ ಪಡೆಯಬಹುದು ಎಂದು ಎಸ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.