Awesome & Handsome Professional Family Salon
Awesome & Handsome Professional Family Salon
ಉಪ್ಪುಂದ: ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆ
ಬೈಂದೂರು: ದೋಣಿ ಮಗುಚಿ ನಾಪತ್ತೆಯಾಗಿದ್ದ ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.30 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ. ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ. […]
ಕುಂದಾಪುರ: ನಾಳೆ (ಸೆ.19) ಕರಾವಳಿಯ ಪ್ರಸಿದ್ಧ ಕ್ರೀಡಾ ಮಳಿಗೆ ‘ಗ್ಯಾಲಕ್ಸಿ ಸ್ಪೋರ್ಟ್ಸ್ ವರ್ಲ್ಡ್’ ನ ಸ್ಥಳಾಂತರ ಹಾಗೂ ಉದ್ಘಾಟನಾ ಸಮಾರಂಭ
ಕುಂದಾಪುರ: ಕಳೆದ 26 ವರ್ಷಗಳಿಂದ ಕ್ರೀಡಾ ಸಲಕರಣೆಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಕ್ರೀಡಾ ಮಳಿಗೆ ‘ಗ್ಯಾಲಕ್ಸಿ ಸ್ಪೋರ್ಟ್ಸ್ ವರ್ಲ್ಡ್’ ಕುಂದಾಪುರದ ಮಳಿಗೆ ಶಾಸ್ತ್ರೀ ಸರ್ಕಲ್ ಬಳಿಯ ಜೇಸಿ ಕಾಂಪ್ಲೆಕ್ಸ್ ನ ಸ್ವಂತ ಶೋರೂಮ್ ಗೆ ಸ್ಥಳಾಂತರಗೊಳ್ಳಲಿದೆ. ಸ್ಥಳಾಂತರಿತ ನೂತನ ಮಳಿಗೆಯ ಉದ್ಘಾಟನಾ ಸಮಾರಂಭ ನಾಳೆ (ಸೆ.19) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ, ಕರ್ನಾಟಕ ಬ್ಯಾಂಕ್ ನ ಎಜಿಎಂ ಮಾಧವ ವಿ.ಪಿ., ಕುಂದಾಪುರ ಚಕ್ರವರ್ತಿ ಕ್ರಿಕೆಟ್ ಕ್ಲಬ್ […]
ಲಾಭ–ನಷ್ಟದ ಲೆಕ್ಕಾಚಾರ ಹಾಕದೇ ಪ್ರತಿ ಗ್ರಾಮಕ್ಕೂ ಬಸ್ ಸೌಲಭ್ಯ: ಸಾರಿಗೆ ಸಚಿವ ಬಿ. ಶ್ರೀರಾಮುಲು
ಚಿತ್ರದುರ್ಗ: ರಾಜ್ಯದ ಪ್ರತಿ ಹಳ್ಳಿಗೂ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನಿಸಲಿದೆ. ಇದರಲ್ಲಿ ಲಾಭ–ನಷ್ಟದ ಲೆಕ್ಕಾಚಾರ ಹಾಕುವ ಪ್ರಶ್ನೆಯೇ ಇಲ್ಲ. ಹಳ್ಳಿಗಳಿಗೆ ಸಾರಿಗೆ ಸಂಪರ್ಕ ಒದಗಿಸುವುದೇ ಸರ್ಕಾರದ ಉದ್ದೇಶ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಹಳ್ಳಿಗಳಿಗೆ ಸಾರಿಗೆ ಸಂಪರ್ಕ ಇಲ್ಲ ಎಂಬುದು ಮಾಧ್ಯಮದ ಮೂಲಕ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಸಂಕಷ್ಟ ಇರುವುದು ಗೊತ್ತಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]
ಪಂಜಾಬ್ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈ ಮಧ್ಯೆ ಕಾಂಗ್ರೆಸ್ನ ಪಂಜಾಬ್ ಘಟಕದಲ್ಲಿ ಮತ್ತೊಮ್ಮೆ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಜೊತೆಗಿನ ವೈಮನಸ್ಸಿನಿಂದ ಬೇಸತ್ತಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವಜೋತ್ ಸಿಂಗ್ರನ್ನ ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಅಮರಿಂದರ್ ಸಿಂಗ್ಗೆ ಇದು ಅಸಮಾಧಾನ ಉಂಟು ಮಾಡಿತ್ತು. ತಮ್ಮನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಲಾಗುತ್ತಿದೆ ಅನ್ನೋದು ಕ್ಯಾಪ್ಟನ್ ಅಮರಿಂದರ್ […]