ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (ಟಿಎಂಸಿ) ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅವರು ಕೆಲವೇ ದಿನಗಳ ಹಿಂದಷ್ಟೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದರು. ಆದಾಗ್ಯೂ ಅವರು ಸಂಸದ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿರಲಿಲ್ಲ. ಟಿಎಂಸಿಯ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸುತ್ತಿದ್ದವರಲ್ಲಿ ಪ್ರಮುಖರಾಗಿದ್ದ ಬಾಬುಲ್, ಜುಲೈನಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದರು ಮತ್ತು ಮುಂದೆ ಯಾವುದೇ ಪಕ್ಷವನ್ನು […]
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರು ನೇಮಕಗೊಂಡಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಮೇಶ್ ಕಾಂಚನ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಆದೇಶದ ಪ್ರತಿಯನ್ನು ಶನಿವಾರ ರಮೇಶ್ ಕಾಂಚನ್ ಅವರಿಗೆ ಹಸ್ತಾಂತರಿಸಿದರು. ರಮೇಶ್ ಕಾಂಚನ್ ಅವರು ಒಂದು […]
ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದೆ: ತಹಶೀಲ್ದಾರ್ ಶೋಭಾಲಕ್ಷ್ಮೀ

ಬೈಂದೂರು: ಇಂದು ವಿಶ್ವಕರ್ಮ ದಿನ, ವಿಶ್ವಕರ್ಮನು ಪಂಚಬ್ರಹ್ಮರ ಮೂಲಕ, ಲೋಕಕ್ಕೆ ಪಂಚಶಿಲ್ಪ ಕಾರ್ಯಗಳ ಮೂಲಕ ಸೃಷ್ಟಿಯಲ್ಲಿ ಸೃಜನಶೀಲತೆ ನಿರಂತರವಾಗಿ ನಡೆಯುತ್ತಿರುವಂತೆ ನೋಡಿಕೊಂಡವನು. ಹೀಗಾಗಿ ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಶೋಭಾಲಕ್ಷ್ಮೀ ಹೇಳಿದರು. ಅವರು ಶುಕ್ರವಾರ ಬೈಂದೂರು ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಿಸಿ, ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಅದೇ ರೀತಿ ಸಮುದಾಯದ ಮೂಲಕ […]
ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಇದು ಸೂಕ್ತ ಸಮಯವಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಲು ಇದು ಸೂಕ್ತ ಸಮಯವಲ್ಲ ಎಂದು ಜಿಎಸ್‌ಟಿ ಮಂಡಳಿ ಅಭಿಪ್ರಾಯಪಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್‌ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ, ಇವುಗಳ ಮೇಲೆ ವಿಧಿಸಲಾಗುತ್ತಿರುವ ತೆರಿಗೆ ತಗ್ಗುತ್ತದೆ. ಪರಿಣಾಮವಾಗಿ ಇವುಗಳ ಬೆಲೆಯು ದೇಶಿ ಮಾರುಕಟ್ಟೆಯಲ್ಲಿ ಗಣನೀಯವಾಗಿ ಇಳಿಕೆ ಆಗುತ್ತದೆ. ಆದರೆ, ಹೀಗೆ ಮಾಡುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವರಮಾನಕ್ಕೆ ಪೆಟ್ಟು ಬೀಳುತ್ತದೆ ಎಂದು ಹೇಳಿದೆ. ಪೆಟ್ರೋಲ್ ಹಾಗೂ ಡೀಸೆಲ್ […]
ದೋಣಿ ಮುಳುಗಡೆ; ಓರ್ವ ಮೀನುಗಾರ ಮೃತ್ಯು, ಇನ್ನೋರ್ವ ನಾಪತ್ತೆ

ಬೈಂದೂರು: ಮೀನುಗಾರಿಕೆಗೆ ತೆರೆಳಿದ ಜೈ ಗುರೂಜಿ ಪಟ್ಟೆಬಲೆ ಎಂಬ ದೋಣಿ ಮುಳುಗಡೆಯಾಗಿ ಓರ್ವ ಮೀನುಗಾರ ಮೃತಪಟ್ಟಿದ್ದು, ಇನ್ನೋರ್ವ ಮೀನುಗಾರ ನಾಪತ್ತೆಯಾಗಿರುವ ಘಟನೆ ಶುಕ್ರವಾರ ರಾತ್ರಿ ಪಡುವರಿ ಗ್ರಾಮದ ತಾರಾಪತಿ – ಅಳ್ವೆಕೋಡಿಗೆಯಲ್ಲಿ ಸಂಭವಿಸಿದೆ. ಮೃತ ಮೀನುಗಾರನನ್ನು ಚರಣ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಅಣ್ಣಪ್ಪ ಮೊಗವೀರ (45) ನಾಪತ್ತೆಯಾಗಿದ್ದಾರೆ. ಈ ಇಬ್ಬರು ಸೇರಿದಂತೆ ಒಟ್ಟು 7 ಜನರು ಮೀನುಗಾರಿಕೆಗೆ ತೆರೆಳಿದ್ದರು. ಘಟನೆಯ ವಿವರ : ಮಧ್ಯಾಹ್ನದ ಬಳಿಕ ಅಳುವೆಕೋಡಿಯಿಂದ ಮೀನುಗಾರಿಕೆಗೆ ಜೈ ಗುರೂಜಿ ಹೆಸರಿನ ನಾಡದೋಣಿಯಲ್ಲಿ 7 […]