ಕಂಬಳದ ಬೆತ್ತ ಉದ್ಯಮದತ್ತ ಚಿತ್ತ ಹರಿಸಿ ಬದುಕು ಕಟ್ಟಿಕೊಂಡ ದಂಪತಿಯ ಕತೆಯಿದು!

ಕಂಬಳ ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಕಂಬಳ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ, ಕಂಬಳ ಕೋಣಗಳನ್ನು ಓಡಿಸಲು ಬೆತ್ತವನ್ನು ಮಾಡುತ್ತಾರೆ. ಆ ಕಂಬಳದ ಬೆತ್ತಕ್ಕೆ ವಿಶಿಷ್ಠ ಸ್ಥಾನಮಾನವಿದೆ. ಕಂಬಳದ ಬೆತ್ತ ಮಾಡುತ್ತ ಬದುಕು ಕಟ್ಟಿಕೊಂಡಿರುವ ಕಾರ್ಕಳ ತಾಲೂಕಿನ ಕುಟುಂಬವೊಂದಿದೆ. ಕಂಬಳದ ಬೆತ್ತಗಳನ್ನು ಮಾರಾಟ ಮಾಡಿ ಜೀವನ ಸಾಗಿಸುವ ಕುಟುಂಬ ಯಶೋಗಾಥೆ ಕೇಳೋಣ ಬನ್ನಿ. ಈ […]
ಉಡುಪಿ ವಕೀಲರ ಸಂಘ: ನೂತನ ಅಧ್ಯಕ್ಷರಾಗಿ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧ ಆಯ್ಕೆ

ಉಡುಪಿ: ಉಡುಪಿ ವಕೀಲರ ಸಂಘದ 2021-22 ಹಾಗೂ 2022-23 ನೇ ಸಾಲಿನ ಅಧ್ಯಕ್ಷರಾಗಿ ಬಿ. ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಶೀಂದ್ರ ಕುಮಾರ್ ಶುಕ್ರವಾರ ಘೋಷಿಸಿದ್ದಾರೆ. ಬಿ. ನಾಗರಾಜ್ ಈ ಹಿಂದಿನ ಸಾಲಿನಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ರೆನೋಲ್ಡ್ ಪ್ರವೀಣ್ ಕುಮಾರ್ ಕಳೆದ 4 ಅವಧಿಗಳಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಉಳಿದಂತೆ ಅವಿರೋಧವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಈ ಕೆಳಗಿನಂತಿದೆ: […]