ಶಿರ್ಲಾಲು: ಹಿಂದೂ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಹಸುಗಳ ರಕ್ಷಣೆ
ಶಿರ್ಲಾಲು: ಮಾರುತಿ ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ಕಾರ್ಯಾಚರಣೆಗೆ ಬೆಚ್ಚಿದ ಗೋಕಳ್ಳರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ಗಂಟೆಯಲ್ಲಿ ಈ ಕೃತ್ಯ ನಡೆದಿದೆ. ಕಾರ್ಯಕರ್ತರು ಪ್ರತಿಭಟನಾ ಸಭೆ ಮುಗಿಸಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಸಿಕ್ಕಿತ್ತು. ಇದನ್ನು ಬೆನ್ನತ್ತಿದ ಕಾರ್ಯಕರ್ತರು […]
ಪಂಜಾಬ್ನ ನೂತನ ಸಿಎಂ ಆಗಿ ಚರಣ್ಜೀತ್ ಸಿಂಗ್ ಚನ್ನಿ ಆಯ್ಕೆ
ಚಂಡೀಗಡ: ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಚರಣ್ಜೀತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿದ್ದಾರೆ. ಚರಣ್ಜೀತ್ ಸಿಂಗ್ ಚನ್ನಿ ಅವರು ಪಂಜಾಬ್ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಹರ್ಷಪಡುತ್ತೇನೆ ಎಂದು ಪಕ್ಷದ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.
ಯುವಜನತೆ ಪಾಶ್ಚಾತ್ಯ ಭಾಷೆಗಳಿಗೆ ಮರುಳಾಗುತ್ತಿರುವುದು ಖೇದಕರ ಸಂಗತಿ: ಸ್ಟ್ಯಾನಿ ಬಿ ಲೋಬೊ
ಉಡುಪಿ: ಇಂದಿನ ಯುವ ಸಮುದಾಯ ಮಾತೃ ಭಾಷೆಯನ್ನು ಮರೆತು ಪಾಶ್ಚಾತ್ಯ ಭಾಷೆಗಳಿಗೆ ಹೆಚ್ಚಿನ ಒಲವು ತೋರಿಸುತ್ತಿರುವುದು ಖೇದಕರ ಸಂಗತಿ. ಮಾತೃಭಾಷೆಯನ್ನು ನಮ್ಮ ದೈನಂದಿನ ಜೀವನದಲ್ಲಿ ಹೆಚ್ಚು ಬಳಸುವಂತಾಗಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಹಾಗೂ ಉದ್ಯಾವರ ಚರ್ಚಿನ ಧರ್ಮಗುರುಗಳಾದ ಸ್ಟ್ಯಾನಿ ಬಿ ಲೋಬೊ ಹೇಳಿದರು. ಅವರು ಭಾನುವಾರ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ, ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ ಹಾಗೂ ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯ […]
ಹೆಜಮಾಡಿ: ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ, ಪೋಸ್ಟ್ ಕಾರ್ಡ್ ಅಭಿಯಾನ
ಹೆಜಮಾಡಿ: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವೆ ಹಾಗೂ ಸಮರ್ಪಣಾ ಅಭಿಯಾನದ ಪ್ರಯುಕ್ತ “ರಕ್ತದಾನ ಶಿಬಿರ” ಹಾಗೂ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಹುಟ್ಟು ಹಬ್ಬದ ಶುಭಹಾರೈಕೆಯನ್ನು ಸಲ್ಲಿಸಲು “ಪೋಸ್ಟ್ ಕಾರ್ಡ್ ” ಅಭಿಯಾನವನ್ನು ಹೆಜಮಾಡಿಯ ಬಿಲ್ಲವ ಸಭಾಭವನದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಪಡುಬಿದ್ರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಕೀರ್ತನ್ ಪೂಜಾರಿ ವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ […]
ಹಿಂದೂ ದೇಗುಲಗಳ ರಕ್ಷಣೆ ಸರಕಾರದ ಪ್ರಥಮ ಆದ್ಯತೆಯಾಗಲಿ: ಯಶ್ ಪಾಲ್ ಸುವರ್ಣ
ಉಡುಪಿ: ದೇಶದಾದ್ಯಂತ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳನ್ನು ಗೌರವಿಸಿ ಹಿಂದೂ ದೇಗುಲಗಳ ರಕ್ಷಣೆ ಸರಕಾರದ ಪ್ರಥಮ ಆದ್ಯತೆಯಾಗಲಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ದೇವಾಲಯದ ರಕ್ಷಣೆಯ ಬಗ್ಗೆ ಹಿಂದಿನ ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷ್ಯ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣದ ವೋಟ್ ಬ್ಯಾಂಕ್ ರಾಜಕಾರಣ ಧೋರಣೆಯಿಂದ ಸುಪ್ರೀಂಕೋರ್ಟಿಗೆ ಸೂಕ್ತ ವರದಿ ನೀಡದಿರುವ ಪರಿಣಾಮ ಇಂದು ದೇವಾಲಯಗಳನ್ನು ತೆರವುಗೊಳಿಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿರುವುದು ದುರದೃಷ್ಟಕರ ಎಂದಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ […]