ರಕ್ತದಾನದಿಂದ ಮಾನವೀಯ ಸಮಾಜ ಕಾಣಲು ಸಾಧ್ಯ: ಎಸ್. ಜಯಕರ ಶೆಟ್ಟಿ
ಕುಂದಾಪುರ: ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ನೇತೃತ್ವದಲ್ಲಿ ಅಭಯಹಸ್ತ ಹೆಲ್ಪ್ ಲೈನ್ ಉಡುಪಿ, ರೋಟರಿ ಕ್ಲಬ್ ತೆಕ್ಕಟ್ಟೆ, ಹೆಲ್ಪಿಂಗ್ ಹ್ಯಾಂಡ್ ಕುಂದಾಪುರ, ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ, ಕುಂದಾಪುರ ಇವರ ಜಂಟಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಭಾನುವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲಾಧ್ಯಕ್ಷ ಶಿವರಾಮ ಕೆ.ಎಂ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ, ಮಾತನಾಡಿ ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತಸ್ರಾವಗೊಂಡ ರೋಗಿಗಳು […]
ಕುಂದಾಪುರ: ಕರಾವಳಿಯ ಪ್ರಸಿದ್ಧ ‘ಗ್ಯಾಲಕ್ಸಿ ಸ್ಪೋರ್ಟ್ಸ್ ವರ್ಲ್ಡ್’ ನ ಸ್ಥಳಾಂತರಿತ ಮಳಿಗೆಯ ಉದ್ಘಾಟನೆ
ಕುಂದಾಪುರ: ಕಳೆದ 26 ವರ್ಷಗಳಿಂದ ಕ್ರೀಡಾ ಸಲಕರಣೆಗಳಿಗೆ ಹೆಸರುವಾಸಿಯಾಗಿರುವ ‘ಗ್ಯಾಲಕ್ಸಿ ಸ್ಪೋರ್ಟ್ಸ್ ವರ್ಲ್ಡ್’ ಕುಂದಾಪುರ ಮಳಿಗೆ ಶಾಸ್ತ್ರೀ ಸರ್ಕಲ್ ಬಳಿಯ ಜೇಸಿ ಕಾಂಪ್ಲೆಕ್ಸ್ ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ಸ್ಥಳಾಂತರಿತ ನೂತನ ಮಳಿಗೆಯನ್ನು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕರ್ನಾಟಕ ಬ್ಯಾಂಕ್ ನ ಎಜಿಎಂ ಮಾಧವ ವಿ.ಪಿ., ಕುಂದಾಪುರ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಮಾಜಿ ನಾಯಕ ಶ್ರೀಪಾದ್ ಉಪಾಧ್ಯಯ, ರಾಷ್ಟಮಟ್ಟದ ವಾಲಿಬಾಲ್ […]
ಉಡುಪಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ.!
ಉಡುಪಿ: ಉಡುಪಿ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರ ನೇಮಕದ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಳೆದೊಂದು ವರ್ಷದಿಂದ ಪಕ್ಷದೊಳಗೆ ನಡೆಯುತ್ತಿದ್ದ ಬ್ಲಾಕ್ ಅಧ್ಯಕ್ಷರ ಆಯ್ಕೆ ಬಿಕ್ಕಟ್ಟು ಕಡೆಗೂ ಶಮನವಾಗಿದೆ. ಆದರೆ ಇದು ಮತ್ತೊಂದು ಬಂಡಾಯಕ್ಕೆ ಕಾರಣವಾಗಿದೆ. ನೂತನ ಬ್ಲಾಕ್ ಅಧ್ಯಕ್ಷರನ್ನಾಗಿ ರಮೇಶ್ ಕಾಂಚನ್ ಅವರನ್ನು ನೇಮಕಗೊಳಿಸಿ ಹೆಸರು ಘೋಷಣೆ ಆಗುತ್ತಿದ್ದಂತೆ, ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸಮಾಜಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ಬೆಂಬಲಿಗರು ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಕೃಷ್ಣಮೂರ್ತಿ […]