ರಾಜ್‍ಫಿಶ್‍ಮೀಲ್ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.!

ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಾಲುದಾರರಾಗಿರುವ ರಾಜ್‍ಫಿಶ್‍ಮೀಲ್ ಮತ್ತು ಆಯಿಲ್ ಕಂಪೆನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರಾಜ್‍ಫಿಶ್‍ಮೀಲ್ ಸಾವನ್ನಪ್ಪಿದ ಮೀನು ಮತ್ತು ತ್ಯಾಜ್ಯವನ್ನು ನದಿಗೆ ಹರಿಬಿಟ್ಟು ನೀರು ಕಲುಷಿತಗೊಳಿಸುವುದರ ಜೊತೆಗೆ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ. ಈ ಕಂಪೆನಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೋರಿ ಅರ್ಜಿದಾರ ಮಾಜಿ ನಗರಸಭಾ ಸದಸ್ಯ ಪ್ರಶಾಂತ್ ಅಮಿನ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ […]

ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾದಿಂದ ಅಂಧರಿಗೆ ನೆರವು ಕಾರ್ಯಕ್ರಮ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಮತ್ತು ಎಸ್ಸಿಲರ್ ವಿಷನ್ ಫೌಂಡೇಶನ್ ಇವರ ಸಹಯೋಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ,ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಕೋಟ ಮಾಂಗಲ್ಯ ಸಭಾಮಂದಿರದಲ್ಲಿ ಆಯೋಜಿಸಲಾಯಿತು. ಕೇಂದ್ರ ಕೃಷಿ ಮತ್ತು […]

ಅಖಾಡ ಪರಿಷತ್ತಿನ ಮುಖ್ಯಸ್ಥ ಮಹಂತ್ ನರೇಂದ್ರ ಗಿರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಪ್ರಯಾಗರಾಜ್: ಅಖಿಲ ಭಾರತೀಯ ಅಖಾಡಾ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮಹಾರಾಜ್ ಅವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಮೃತದೇಹ ಪ್ರಯಾಗರಾಜ್‍ ನ ಮಹಾಂತ್ ಬಘಂಬರಿ ಗಡ್ಡಿ ಆಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನರೇಂದ್ರ ಗಿರಿಯ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಘಟನಾ ಸ್ಥಳದಲ್ಲಿ ಡೆತ್ ನೋಟ್‍ ದೊರೆತಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಗೊತ್ತಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಡೆತ್ ನೋಟ್‍ ನಲ್ಲಿ ಹಲವು ವಿಚಾರಗಳನ್ನು ಉಲ್ಲೇಖಿಸಲಾಗಿದೆ. 7-8 ಪುಟಗಳಿರುವ ಡೆತ್ […]

ಸಿಇಟಿ ಇಂಜಿನಿಯರಿಂಗ್ ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಕಾರ್ಕಳ: ರಾಜ್ಯಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. 500ರೊಳಗೆ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ. ಅಭಯ್ ಕಾಮತ್ – 17, ಶ್ರೇಯಸ್ ಪೈ – 114, ದೀಪಕ್ ಎಸ್. ಎಚ್ -116, ಕುಂಬಾರ್ ಅನೀಶ್ –156, ಮನ್ವಿತ್ ಪ್ರಭು –157, ಧ್ರುವ ಎಸ್. ನಾಯಕ್ – 288, ಸಂದೀಪ್ ಎಸ್ – 322, ಸುಪ್ರೀತ್ ಗೌಡ – 405, ಸುಕ್ಷಿತ್ ಪಿ. ಎಚ್ – 446, […]

ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವುದ್ ಅಬೂಬಕರ್ ಅವರ ನೇತೃತ್ವದಲ್ಲಿ ಪ್ಲಾಸ್ಟಿಕ್ ಮುಕ್ತ ಮತ್ತು ಪ್ಲಾಸ್ಟಿಕ್ ಸ್ವಚ್ಛತಾ ಸೇವಾ ಕಾರ್ಯಕ್ರಮ ಮಲ್ಪೆ ಬೀಚ್ ನ ಮಹಾತ್ಮ ಗಾಂಧೀಜಿಯವರ ಪ್ರತಿಮೆಯ ಬಳಿ ನಡೆಯಿತು. ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಮುಜಮ್ಮಿಲ್ ಅಹ್ಮದ್ ಬಾಬು ಕಾಟನ್ ಕೈಚೀಲ ಕೊಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಂಡಳಿಯ ನಿರ್ದೇಶಕರಾದ ಸಿರಾಜೂದ್ದೀನ್ ರವರು ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. […]