ಕಾರ್ಕಳ: ಕಾಲೇಜು ಉಪನ್ಯಾಸಕಿ ನೇಣಿಗೆ ಶರಣು

ಕಾರ್ಕಳ: ಕಾಲೇಜಿನ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಪೆರ್ವಾಜೆ ಎಂಬಲ್ಲಿ ನಡೆದಿದೆ. ಇನ್ನಾ ಗ್ರಾಮಕರಣೀಕರ ರವಿಶಂಕರ್ ಅವರ ಪತ್ನಿ ಕಾರ್ಕಳ ಎಸ್ ವಿಟಿ ಕಾಲೇಜಿನ ಉಪನ್ಯಾಸಕಿ ಮಮತಾ ಶೆಟ್ಟಿ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಇಂದು ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತಿ, ಓರ್ವ ಪುತ್ರನನನ್ನು ಅಗಲಿದ್ದಾರೆ.
ಕಾರ್ಕಳ: ಸಿಂಧೂರ ವಿದ್ಯಾರ್ಥಿ ವೇತನ ಕಾರ್ಯಕ್ರಮ

ಕಾರ್ಕಳ: ಸಿಂಧೂರ ವಿದ್ಯಾರ್ಥಿ ವೇತನ ಕಾರ್ಯಕ್ರಮ ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ ಸಂಚಾಲಕರಾದ ಜೇರಾಲ್ಡ್ ಡಿಸಿಲ್ವ […]
ಸಿಎ ಇಂಟರ್ಮೀಡಿಯೇಟ್ ಪರೀಕ್ಷೆ: ಕುಂದಾಪುರ ಶಿಕ್ಷ ಪ್ರಭಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಕುಂದಾಪುರ: ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(ಸ್ಪೇಸ್) ಸಿಎ/ಸಿಎಸ್/ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಅವರು 543 ಅಂಕ ಗಳಿಸುವುದರೊಂದಿಗೆ ಅಖಿಲ ಭಾರತಕ್ಕೆ 29ನೇರ‍್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ರಕ್ಷಿತ್ ಶೆಟ್ಟಿ 246, ಸಿಂಚನ ಶೆಟ್ಟಿ 239, ಸುದರ್ಶನ್ ಅಡಿಗ […]
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶ ವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವ ಸಮಿತಿ ಹಾಗೂ ಪರ್ಯಾಯ ಕಚೇರಿಯ ಉದ್ಘಾಟನೆ

ಉಡುಪಿ: ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವ ಸಮಿತಿಯ ಹಾಗೂ ಪರ್ಯಾಯ ಕಚೇರಿಯ ಉದ್ಘಾಟನಾ ಸಮಾರಂಭವು ಕೃಷ್ಣಾಪುರ ಮಠದ ಶ್ರೀಕೃಷ್ಣಸಭಾ ಮಂದಿರದಲ್ಲಿ ನಡೆಯಿತು. ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಮಾತನಾಡಿ, ಪರ್ಯಾಯೋತ್ಸವವು ಪ್ರತಿ ಬಾರಿ ನಡೆಯುವಂತೆ ತಯಾರಿ ನಡೆಸಿ ಆ ಸಮಯದಲ್ಲಿ ಕೋವಿಡ್ ನಿಯಮಾನುಸಾರ ನಡೆಸಲಾಗುವುದು. ನಾವು ಮಾಡುವ ಉತ್ತಮ ಕಾರ್ಯವು ದೇವರ ಚಿತ್ತಕ್ಕೆ ಬಂದು ದೇಶಕ್ಕೆ ಕಲ್ಯಾಣವಾಗಲಿ ಎಂದರು. ನಮ್ಮ ಪರ್ಯಾಯವಾಗಿರದೆ ಗುರುಗಳಾದ ಮಧ್ವಾಚಾರ್ಯರ, ಭಾವೀ ಸಮೀರರಾದ […]