ತೂಗುಸೇತುವೆ ಹರಿಕಾರ ಗಿರೀಶ್ ಭಾರದ್ವಾಜ್ ಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆ ಸರದಾರ ಸುಳ್ಯದ ಗಿರೀಶ್ ಭಾರದ್ವಾಜ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು. ಎಸ್. ಶೆಣೈ ಈ ಬಗ್ಗೆ ಮಾಹಿತಿ ನೀಡಿದರು. ಕಾರಂತ ಜನ್ಮದಿನೋತ್ಸವ ಅಂಗವಾಗಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಅಕ್ಟೋಬರ್ 1ರಿಂದ 10 ರವರೆಗೆ ಆನ್ಲೈನ್ ಮೂಲಕ ವಿವಿಧ ಸಾಂಸ್ಕೃತಿಕ […]
ತುಳು, ಕೊಡವ ಭಾಷೆಗಳಿಗೆ ರಾಜ್ಯಭಾಷಾ ಸ್ಥಾನಮಾನ ನೀಡಲು ಕ್ರಮ; ಸಚಿವ ಸುನೀಲ್ ಕುಮಾರ್
ಬೆಂಗಳೂರು: ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಿ, ರಾಜ್ಯಭಾಷಾ ಸ್ಥಾನಮಾನ ನೀಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಭರವಸೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಶೂನ್ಯವೇಳೆಯಲ್ಲಿ ಮಾಡಿದ ಆಗ್ರಹಕ್ಕೆ ಉತ್ತರಿಸಿದ ಅವರು, ‘ತುಳು ಮತ್ತು ಕೊಡವ ಎರಡೂ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಇರುವ ತೊಡಕುಗಳ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನಾನು ಖುದ್ದಾಗಿ ದೆಹಲಿಗೆ ಹೋಗಿ […]