ನ್ಯಾಯಾಧೀಶರ ಎದುರಿನಲ್ಲೇ ನಡೆಯಿತು ಘನಘೋರ ಶೂಟೌಟ್: ಗ್ಯಾಂಗ್ ಸ್ಟರ್ ಸಹಿತ ಮೂವರು ಸಾವು
ದೆಹಲಿ: ನ್ಯಾಯಾಧೀಶರ ಎದುರಿನಲ್ಲೇ ಘನಘೋರ ಶೂಟೌಟ್ ನಡೆದು ಗ್ಯಾಂಗ್ ಸ್ಟರ್ ಸಹಿತ ಮೂವರು ಹತ್ಯೆಗೀಡಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಹರಿಯಾಣದ ಕುಖ್ಯಾತ ಗ್ಯಾಂಗ್ಸ್ಟರ್ ಜಿತೇಂದರ್ ಗೋಗಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯದೊಳಗೆ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಸುನೀಲ್ ಅಲಿಯಾಸ್ ಟಿಲ್ಲು ತಾಜಪುರಿಯಾ ನೇತೃತ್ವದ ಎದುರಾಳಿ ತಂಡದ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ವಕೀಲರ ವೇಷದಲ್ಲಿ ಬಂದು ಗುಂಡು ಹಾರಿಸಿದರು. ಗೋಗಿ ಜೊತೆಗಿದ್ದ ವಿಶೇಷ ಸೆಲ್ ಕೌಂಟರ್ […]
ಉಡುಪಿ: ಮೀನುಗಾರರ ಸಂಘದ ಸದಸ್ಯರ ಹೊಸ ನೋಂದಣಿ- ನವೀಕರಣ ಪ್ರಕ್ರಿಯೆ ಆರಂಭ
ಉಡುಪಿ: ಪ್ರಸಕ್ತ ಸಾಲಿನ “ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ” ಮೀನುಗಾರರ ಕಲ್ಯಾಣ ಯೋಜನೆಯಾದ ಉಳಿತಾಯ ಮತ್ತು ಪರಿಹಾರ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಮೀನುಗಾರರ ಸಹಕಾರ ಸಂಘಗಳು 2021-22ನೇ ಸಾಲಿಗೆ ಸದಸ್ಯರ ಹೊಸ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದಾಗಿದೆ. ಸದರಿ ಯೋಜನೆಯಡಿ ಭಾಗವಹಿಸಲು ಇಚ್ಛಿಸುವ ಫಲಾನುಭವಿಗಳು ಬಿ.ಪಿ.ಎಲ್ ಕಾರ್ಡ್ ದಾರರಾಗಿದ್ದು, 18 ರಿಂದ 60 ವರ್ಷ ವಯೋಮಾನದವರಾಗಿರಬೇಕು. ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಬಿ.ಪಿ.ಎಲ್ ಕಾರ್ಡ್ ಪ್ರತಿ ಹಾಗೂ ಸಂಘದಲ್ಲಿ ಸದಸ್ಯರಾಗಿರುವ ಬಗ್ಗೆ ದೃಢೀಕರಣ ಪತ್ರದೊಂದಿಗೆ […]
ಕಾರ್ಕಳ: ಬಾವಿಗೆ ಬಿದ್ದು ವಿಲವಿಲ ಒದ್ದಾಡಿದ ಚಿರತೆ
ಕಾರ್ಕಳ: ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್ ಮಿನೆಜಸ್ ಎಂಬವರ ತೋಟದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಹೀಗಾಗಿ ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಬಂದು ಬಾವಿಗೆ ಬಿದ್ದಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಯಶಸ್ವಿಗೊಳಿಸೋಣ: ಮಹೇಶ್ ಠಾಕೂರ್
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವಾದ ಸೆ.17ರಿಂದ ಮೊದಲ್ಗೊಂಡು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳನ್ನು ಪೂರೈಸುವ ದಿನವಾದ ಅ.7ರ ವರೆಗೆ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸೇರಿ ಯಶಸ್ವಿಗೊಳಿಸೋಣ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ನಗರ ಮಂಡಲದ ಆಶ್ರಯದಲ್ಲಿ […]