ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ: ಯಶ್ಪಾಲ್ ಸುವರ್ಣ
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವಂತೆ ಮನವಿ ಮಾಡಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಬೆಂಗಳೂರಿನ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ […]
ಉಡುಪಿ: ಮೀನುಗಾರರು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡುವುದು ಕಡ್ಡಾಯ
ಉಡುಪಿ: ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಮತ್ತು ಕೋವಿಡ್ ಆರ್ಥಿಕ ಪ್ಯಾಕೇಜ್ ಪರಿಹಾರ ಯೋಜನೆಗಳಿಗೆ, ಫಲಾನುಭವಿಗಳು ಡಿ.ಬಿ.ಟಿ ತಂತ್ರಾಂಶದಲ್ಲಿ ನೋಂದಣಿ ಆಗಬೇಕಾಗಿರುತ್ತದೆ. ಡಿ.ಬಿ.ಟಿ ತಂತ್ರಾಂಶವು ಆಧಾರ್ ಅವಲಂಬಿತವಾಗಿರುವುದರಿಂದ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸುವುದು ಕಡ್ಡಾಯವಾಗಿದ್ದು, ಸದರಿ ತಂತ್ರಾಂಶದಲ್ಲಿ ಈಗಾಗಲೇ ಸಹಾಯಧನ/ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ವಹಿಸಲಾಗುತ್ತಿದೆ. ಅನೇಕ ಫಲಾನುಭವಿಗಳ ಖಾತೆ ಬ್ಯಾಂಕ್ A/c No ಆಧಾರ್ ಲಿಂಕ್ ಆಗದಿರುವುದರಿಂದ ಹಣ ಪಾವತಿಸಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಈ ಫಲಾನುಭವಿಗಳು […]
ಉಡುಪಿ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20 ಹಾಗೂ 2020-21ನೇ ಸಾಲಿನಲ್ಲಿ ನಡೆದ ಸಿಬಿಎಸ್ಸಿ , ಐಸಿಎಸ್ಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶೇ. 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ₹7,000 ಹಾಗೂ ಶೇ.75 ಕ್ಕಿಂತಲು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾಥಿಗಳಿಗೆ ₹15,000 ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ ಅಪ್ಡೇಟ್ ಮಾಡಿಸಲು ತಮ್ಮ ತಾಲೂಕು ವ್ಯಾಪ್ತಿಯ ಸಮಾಜ […]
ಉಡುಪಿ-ಹೈದರಾಬಾದ್ ನಾನ್ ಎಸಿ ಸ್ಲೀಪರ್ ರಾಜಹಂಸ ಬಸ್ ಸಂಚಾರ ಆರಂಭ
ಉಡುಪಿ: ಮಂಗಳೂರು ವಿಭಾಗದ ಉಡುಪಿ ಘಟಕದಿಂದ ಸಾರ್ವಜನಿಕ ಪ್ರಯಾಣಿಕರಿಗೆ ಪ್ರಸುತ್ತ ಕಾರ್ಯಾಚರಣೆಯಲ್ಲಿರುವ ಉಡುಪಿ-ಹೈದರಾಬಾದ್ ರಾಜಹಂಸ ವಾಹನ ಕಾರ್ಯಚರಣೆಯನ್ನು ಮೇಲ್ದರ್ಜೆಗೇರಿಸಿ ಸೆಪ್ಟೆಂಬರ್ 27 ರಿಂದ ಮಧ್ಯಾಹ್ನ 3 ಗಂಟೆಗೆ ಉಡುಪಿ-ಹೈದರಾಬಾದ್ ನಾನ್-ಎಸಿ ಸ್ಲೀಪರ್ ವಾಹನ ಅನುಸೂಚಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಸದರಿ ವಾಹನವು ಮರುದಿನ ಬೆಳಿಗ್ಗೆ 9.30ಕ್ಕೆ ಹೈದರಾಬಾದ್ ತಲುಪಲಿದ್ದು, ಹೈದರಾಬಾದ್ ನಿಂದ ಸಂಜೆ 5.30ಕ್ಕೆ ಬಿಟ್ಟು ಮರುದಿನ ಬೆಳಿಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ. ಪ್ರಯಾಣದ ದರವು ₹ 1250 ಎಂದು ನಿಗದಿಪಡಿಸಲಾಗಿದ್ದು, ಮುಂಗಡ ಬುಕ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ […]
ಉಡುಪಿ: ಸೆ. 29ಕ್ಕೆ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ
ಉಡುಪಿ: ಪ್ರಸಕ್ತ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ, ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 29 ರಂದು ಬೆಳಗ್ಗೆ 9.30ಗಂಟೆಯಿಂದ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 60 ವರ್ಷ ಮೇಲ್ಪಟ್ಟ ಕೋವಿಡ್ 1 ಮತ್ತು 2 ಲಸಿಕೆ ಪಡೆದಿರುವ ಹಿರಿಯ ನಾಗರಿಕರು, ಹಿರಿಯ ನಾಗರಿಕರ ಗುರುತು ಚೀಟಿ ಅಥವಾ ವಯಸ್ಸಿನ ಅಧಿಕೃತ ದಾಖಲೆಗಳೊಂದಿಗೆ ಈ ಕೆಳಕಂಡ ಸ್ಪರ್ಧೆಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಕ್ರೀಡಾ ಸ್ಪರ್ಧೆಗಳು: 60-69 ವರ್ಷ, 70-79 […]