ರಾಜ್ಯದ ಐಟಿಐ ಕಾಲೇಜುಗಳು ₹ 5000 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ: ಸಚಿವ ಡಾ. ಅಶ್ವಥ್ ನಾರಾಯಣ್

ಉಡುಪಿ: ರಾಜ್ಯದಲ್ಲಿನ 150 ಐ.ಟಿ.ಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೆಲ್ದರ್ಜೆಗೆ ಏರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಉಪ್ಪೂರು ನಲ್ಲಿ ಸರಕಾರಿ ಉಪಕರಣಾಗಾರ ಮತ್ತು ನೂತನ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 1200 ಸರಕಾರಿ ಮತ್ತು ಖಾಸಗಿ ಐ.ಟಿ.ಐ ಕಾಲೇಜುಗಳಿದ್ದು, ಸರಕಾರಿ ಐಟಿಐ ಕಾಲೇಜುಗಳಲ್ಲಿ ಕೌಶಲ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ ರಾಜ್ಯ ಸರ್ಕಾರವು […]

ಪಾಲಿಟೆಕ್ನಿಕ್ ಶಿಕ್ಷಣದಿಂದ ಉದ್ಯೋಗ ಖಚಿತ: ಸಚಿವ ಡಾ. ಅಶ್ವಥ್ ನಾರಾಯಣ್

ಉಡುಪಿ: ಪಾಲಿಟೆಕ್ನಿಕ್ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಖಚಿತವಾಗಿ ಉದ್ಯೋಗ ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಂಡು ಅದರ ಪ್ರಯೋಜನ ಪಡೆಯಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ&ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಬೆಳಪುನಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 21 ನೇ ಶತಮಾನದ […]