ಮಣಿಪಾಲ: ಸೆ.29ಕ್ಕೆ ಕೆಎಂಸಿ ಆಸ್ಪತ್ರೆಯ ಹೃದ್ರೋಗ ತಜ್ಞರೊಂದಿಗೆ ಮಾತುಕತೆ- ಸಂವಾದ
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನ 2021ರ ಅಂಗವಾಗಿ ಇದೇ ಸೆಪ್ಟೆಂಬರ್ 29ರ ಬುಧವಾರದಂದು ಸಂಜೆ 5ರಿಂದ 6 ಗಂಟೆಯವರೆಗೆ ಕಸ್ತೂರ್ಬಾ ಆಸ್ಪತ್ರೆಯ ಫೇಸ್ ಬುಕ್ ಚಾನೆಲ್ ನಲ್ಲಿ ಹೃದ್ರೋಗ ತಜ್ಞರೊಂದಿಗೆ ನೇರ ಮಾತುಕತೆ ಮತ್ತು ಮುಕ್ತ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಲಾಕ್ಡೌನ್ ಮತ್ತು ಕೋವಿಡ್ -19 ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಜನರ ಮೇಲೆ ಪರಿಣಾಮ ಬೀರಿತು. ಇದಕ್ಕೆ ಕಾರಣ ಹೆಚ್ಚಾಗಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವ ಆರಾಮದಾಯಕ ಜೀವನ ಶೈಲಿ. […]
ಕುಂದಾಪುರ: ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ
ಉಡುಪಿ: ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಹೇಳಿದರು. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ […]
ಡಾ. ಮಹಾಬಲೇಶ್ವರ ರಾವ್ ಅವರಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ
ಉಡುಪಿ: ಉಡುಪಿಯ ಡಾ. ಮಹಾಬಲೇಶ್ವರ ರಾವ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2019ರ ಮಾನವಿಕ ವಿಭಾಗದಲ್ಲಿ ‘ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು’ ಎಂಬ ಕೃತಿಗೆ ಬಹುಮಾನ ಬಂದಿದ್ದು ಲೇಖಕರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸದ ಕಾರಣ ಭಾನುವಾರ ಮನೆಯಲ್ಲೇ ಬಹುಮಾನ ನೀಡಿ ಗೌರವಿಸಲಾಯಿತು. ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಬಿ.ವಿ.ವಸಂತ ಕುಮಾರ್, ಸದಸ್ಯರಾದ ಡಾ. ಶರಭೇಂದ್ರ ಸ್ವಾಮಿ, ರಿಜಿಸ್ಟ್ರಾರ್ ಎನ್.ಕರಿಯಪ್ಪ ಲೇಖಕರ ಮನೆಗೇ ಬಂದು ಶಾಲು ಹೊದೆಸಿ ಬಹುಮಾನ ವಿತರಿಸಿದರು. ರಾಮಾಂಜಿ, ನರಸಿಂಹ […]
ಅ. 3ರಂದು ಸಬ್-ಇನ್ಸ್ಪೆಕ್ಟರ್ ಲಿಖಿತ ಪರೀಕ್ಷೆ
ಉಡುಪಿ: ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ & ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಪತ್ರಿಕೆ-1 ಮತ್ತು 2ನ್ನು ಕ್ರಮವಾಗಿ ಬೆ. 11 ರಿಂದ 12.30 ಮತ್ತು 3 ರಿಂದ 4.30 ರವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಲಿಖಿತ ಪರೀಕ್ಷೆಯ ಕರೆ ಪತ್ರವನ್ನು ಅಧಿಕೃತ ವೆಬ್‌ಸೈಟ್ www.recruitment.ksp.gov.in ನಿಂದ […]
ಬೈಂದೂರು: ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ
ಬೈಂದೂರು: ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘಟನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಇಂದು ಕರೆಕೊಟ್ಟಿರುವ ಭಾರತ್ ಬಂದ್ ಅನ್ನು ಬೆಂಬಲಿಸಿ ಬೈಂದೂರಿನ ಅಂಡರ್ ಪಾಸ್ ಬಳಿ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಳೆದ 10 ತಿಂಗಳಿನಿಂದ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ. ಕೇಂದ್ರ ಸರಕಾರ ಹೋರಾಟವನ್ನು ದಾರಿತಪ್ಪಿಸಲು ಪ್ರಯತ್ನಿಸಿ ಹತ್ತಿಕ್ಕಲು, […]