ಶಿರೂರು ಮಠದ ಪೀಠಾಧಿಪತಿ ನೇಮಕ ವಿವಾದ: ನ್ಯಾಯಕ್ಕೆ ಸಂದ ಜಯ; ಸೋದೆ ಶ್ರೀ
ಉಡುಪಿ: ಶಿರೂರು ಮಠಕ್ಕೆ ಪೀಠಾಧಿಪತಿಗಳ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿರುವ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರು, ಇದು ನ್ಯಾಯಕ್ಕೆ ಸಂದ ಜಯ. 800 ವರ್ಷಗಳಿಂದ ನಡೆದುಬಂದಿರುವ ಹಾಗೂ ಮೂಲಗುರು ಮಧ್ವಾಚಾರ್ಯರು ಹಾಕಿಕೊಟ್ಟ ಸಂಪ್ರದಾಯಕ್ಕೆ ಹೈಕೋರ್ಟ್ ಮನ್ನಣೆ ನೀಡಿರುವುದು ಅತೀವ ಸಂತೋಷ ತಂದಿದೆ ಎಂದರು. ದ್ವಂದ್ವ ಮಠದ ನೆಲೆಯಲ್ಲಿ ಶಿರೂರು ಮಠದ ಆಡಳಿತವನ್ನು ಎರಡು ಮುಕ್ಕಾಲು ವರ್ಷ ಕಾಲ ನಿರ್ವಹಿಸಿ ಕಳೆದ ಮೇನಲ್ಲಿ ಶಿರೂರು ಮೂಲಮಠಕ್ಕೆ ವೇದವರ್ಧನ […]
ಪರ್ಕಳ- ಮಣಿಪಾಲ ರಸ್ತೆ ಕಾಮಗಾರಿ ಶೀಘ್ರ ಆರಂಭಿಸಲು ಕ್ರಮ: ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್
ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಜನ ಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು. ಅವರು ಇಂದು ನಗರದ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟಿಯ ಹೆದ್ದಾರಿ 66 ಮತ್ತು 169ಎ ಗೆ ಸಂಬAಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ವಾಹನಗಳ ಹಾಗೂ ಜನಸಾಮಾನ್ಯರು ಸುರಕ್ಷಿತ ಹಾಗೂ ಸುಗಮವಾಗಿ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ […]
ಉಡುಪಿ: ಅ. 2ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ; ಯಶ್‌ಪಾಲ್ ಸುವರ್ಣ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಟೀಮ್ ನೇಶನ್ ಫಸ್ಟ್ ಸಹಯೋಗದೊಂದಿಗೆ ಅಕ್ಟೋಬರ್ 2ರಂದು ಗಾಂಧಿ ಜಯಂತಿಯ ಅಂಗವಾಗಿ ಮಲ್ಪೆ ಪಡುಕರೆ ಶಾಂತಿನಗರದಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಆಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮವನ್ನು […]
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್
ನವದೆಹಲಿ: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಮರಿಂದರ್ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ಸೇರ್ಪಡೆಯಾಗುತ್ತಾರಾ? ಅನ್ನೋ ಪ್ರಶ್ನೆಗೆ ಈ ಭೇಟಿ ಮತ್ತಷ್ಟು ಪುಷ್ಠಿ ಸಿಕ್ಕಂತೆ ಆಗಿದೆ. ಈ ಹಿಂದೆ ನವಜೋತ್ ಸಿಂಗ್ ಸಿಧು ಜಟಾಪಟಿಯಿಂದ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕ್ಯಾಪ್ಟನ್ ಸ್ಥಾನಕ್ಕೆ ಕಾಂಗ್ರೆಸ್ […]
13 ವರ್ಷಕ್ಕೆ ಸನ್ಯಾಸ ದೀಕ್ಷೆ ಪಡೆಯುವುದು ತಪ್ಪಲ್ಲ: ಪೇಜಾವರ ಶ್ರೀ
ಉಡುಪಿ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿಯ ನೇಮಕ ಸಂಬಂಧಿಸಿ ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬುಧವಾರ ಮಠದಲ್ಲಿ ಪ್ರತಿಕ್ರಿಯೆ ನೀಡಿದರು. 13 ವರ್ಷ ತುಂಬಿದ ಬಾಲಕನಿಗೆ ಪ್ರೌಢಿಮೆ ಇರುತ್ತದೆ. ಹೀಗಾಗಿ 13 ವರ್ಷ ತುಂಬಿದ ಬಾಲಕನಿಗೆ ಧಾರ್ಮಿಕತೆಯ ನೆಲೆಯಲ್ಲಿ ಸನ್ಯಾಸ ದೀಕ್ಷೆ ನೀಡುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟರು. 13ನೇ ವರ್ಷದಲ್ಲಿ ಸನ್ಯಾಸ ಸ್ವೀಕರಿಸಬಹುದು ಎಂಬ ಅಂಶ ಮಹಾಭಾರತದಲ್ಲಿ ಉಲ್ಲೇಖಿಸಲಾಗಿದೆ. ಆಣಿಮಾಂಡವ್ಯ ಎಂಬ ಮಹರ್ಷಿ ಮಹಾಭಾರತದಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಹಾಗಾಗಿ ಮಠಗಳಿಗೆ ಪ್ರೌಢರನ್ನು […]