SBI: 600 ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್‌ಸಿಒ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 600 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್‌ಬಿಐ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು. ವಯಸ್ಸು: 21 ರಿಂದ 40 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ). ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ […]
ಮಂಗಳೂರು: ಪೆಟ್ರೋಲ್ ಬಂಕ್ ಮ್ಯಾನೇಜರ್ ಗೆ ಹಲ್ಲೆಗೈದು ಲಕ್ಷಾಂತರ ರೂಪಾಯಿ ಸುಲಿಗೆ

ಮಂಗಳೂರು: ಬ್ಯಾಂಕ್ ಗೆ ಹಣ ಹಾಕಲು ಬೈಕ್ ನಲ್ಲಿ ಹೋಗುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ ಓರ್ವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆಗೈದು ₹4.20 ಲಕ್ಷ ಸುಲಿಗೆ ಮಾಡಿದ ಘಟನೆ ಮಂಗಳೂರಿನ ಚಿಲುಂಬಿ ಬಳಿ ನಡೆದಿದೆ. ಗಾಂಧಿನಗರದ ಆಶೀರ್ವಾದ್ ಪೆಟ್ರೋಲ್ ಬಂಕ್ ಮ್ಯಾನೇಜರ್ ಬೋಜಪ್ಪ ಅವರು ಬೈಕ್ ನಲ್ಲಿ ಬ್ಯಾಂಕ್ ಗೆ ಹಣ ಹಾಕಲು ಹೋಗುತಿದ್ದರು. ಈ ವೇಳೆ ದುಷ್ಕರ್ಮಿಗಳು ಬ್ಯಾಟ್ ನಿಂದ ಹಲ್ಲೆಗೈದು ಹಣ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿ ಶಿರೂರು ಮಠದ ಪೀಠಾಧಿಪತಿ ನೇಮಕ ವಿವಾದ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯನ್ನಾಗಿ ಮಾಡಲಾಗಿದೆ ಎಂದು ಪ್ರಶ್ನಿಸಿ ಲತವ್ಯ ಆಚಾರ್ಯ ಹಾಗೂ ಇತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ […]
ಮತಾಂತರ ನಿಷೇಧಕ್ಕೆ ಕಾಯ್ದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಆಸೆ– ಆಮಿಷಗಳನ್ನು ಒಡ್ಡಿ ಅಥವಾ ಬಲವಂತವಾಗಿ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವುದನ್ನು ನಿಷೇಧಕ್ಕಾಗಿ ಕಾಯ್ದೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ಮತಾಂತರಕ್ಕೆ ಅವಕಾಶವಿದೆ. ಆದರೆ, ಹಣ ಮತ್ತು ಇನ್ನಿತರ ರೀತಿಯ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ಕಲಬುರ್ಗಿ ಮತ್ತಿತ್ತರ ಕಡೆಗಳಲ್ಲಿ ಭೇಟಿ ನೀಡಿದಾಗ ಮತಾಂತರ ಮಾಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಪದೇ ಪದೇ ಈ ವಿಚಾರ ಕೇಳಿ ಬರುತ್ತಿರುವ […]